ಬಾಲಕಿಯ ಅ*ತ್ಯಾಚಾರ, ಕೊ*ಲೆ ಪ್ರಕರಣ – ಆರೋಪಿ ಕಾಲಿಗೆ ಗುಂಡೇಟು..!

ಮೈಸೂರು : ದಸರಾದಲ್ಲಿ ಬಲೂನ್‌ ಮಾರಾಟ ಮಾಡುತ್ತಿದ್ದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಿದ್ದಲಿಂಗಪುರದ ಕಾರ್ತಿಕ್‌ ಬಂಧಿತ ಆರೋಪಿ. ಅತ್ಯಾಚಾರ ಮಾಡಿ, ಕೊಲೆಗೈದು ಬಸ್‌ನಲ್ಲಿ ಕೊಳ್ಳೇಗಾಲಕ್ಕೆ ಎಸ್ಕೇಪ್‌ ಆಗಿದ್ದ. ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು ಆಧರಿಸಿ ಕಾರ್ಯಾಚರಣೆಗಿಳಿದ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಬಂಧಿಸಿ ಕರೆತರುವ ವೇಳೆ ಪೊಲೀಸರ ವಶದಿಂದ ತಪ್ಪಿಸಿಕೊಳ್ಳಲು ಈತ ಯತ್ನಿಸಿದ್ದು, ಪೊಲೀಸರು ಆತನ ಮೊಣಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಮಂಡ್ಯದಲ್ಲಿ ಮಹಿಳೆ ಮೇಲೆ […]

ಕಾವೇರಿ ತುಲಾ ಸಂಕ್ರಮಣಕ್ಕೆ ರಜೆ ದಿನಾಂಕ ಪರಿಷ್ಕರಣೆ – ಈ ಬಾರಿ ರಜೆ ಯಾವತ್ತು ಗೊತ್ತಾ..?

ಮಡಿಕೇರಿ : ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಕಾವೇರಿ ತುಲಾ ಸಂಕ್ರಮಣಕ್ಕೆ ಸರ್ಕಾರ ಜಿಲ್ಲೆಗೆ ಅನ್ವಯಿಸುವಂತೆ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಈ ಬಾರಿ ಅಕ್ಟೋಬರ್‌ 17ರ ಮಧ್ಯಾಹ್ನ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿರುವ ಕಾರಣ ಅದೇ ದಿನ ರಜೆ ಘೋಷಿಸಲಾಗಿದೆ. ಈ ಮೊದಲು ಆದೇಶದಲ್ಲಿ 18-10-2025 ಶನಿವಾರ ರಜೆ ಎಂದು ಸರ್ಕಾರ ಘೋಷಿಸಿತ್ತು. ಇದೀಗ ಆ ಆದೇಶವನ್ನು ಪರಿಷ್ಕರಿಸಿ 17ರಂದು ರಜೆ ಘೋಷಿಸಲಾಗಿದೆ ಎಂದು ಶಾಸಕ ಎ.ಎಸ್.‌ ಪೊನ್ನಣ್ಣ ಅವರ ಕಚೇರಿ ಪ್ರಕಟಣೆ ತಿಳಿಸಿದೆ.

ಹರ್‌ ಮಂದಿರ್‌ ಶಾಲೆಯಲ್ಲಿ ಬೆಂಕಿ ಅವಘಡ – ಗಾಯಾಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಾಸಕ ಪೊನ್ನಣ್ಣ

ಮಡಿಕೇರಿ : ಕಾಟಕೇರಿಯ ಹರ್ ಮಂದಿರ್ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಶಾಸಕ ಎ.ಎಸ್.‌ ಪೊನ್ನಣ್ಣ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬೆಂಗಳೂರಿನಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗಿದ್ದ ಪೊನ್ನಣ್ಣ, ತನ್ನ ಪೂರ್ವ ನಿರ್ಧರಿತ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಮಡಿಕೇರಿಗೆ ಆಗಮಿಸಿದರು. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ, ಮಕ್ಕಳು ಹಾಗೂ ಪೋಷಕರಿಗೆ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ಇಲಾಖೆ ತನಿಖೆಯ ವರದಿ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಮೃತ ಬಾಲಕನ […]

ಅನ್ನ ಭಾಗ್ಯ ಯೋಜನೆಯಲ್ಲಿ ಮಹತ್ತರ ಬದಲಾವಣೆ – ಅಕ್ಕಿಯ ಬದಲು ಸಿಗಲಿದೆ ʼಇಂದಿರಾ ಫುಡ್‌ ಕಿಟ್‌ʼ..!

ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. ಈವರೆಗೆ ಅನ್ನಭಾಗ್ಯ ಯೋಜನೆಯಡಿ ವ್ಯಕ್ತಿಗೆ 05 ಅಕ್ಕಿಯನ್ನು ರಾಜ್ಯ ಸರ್ಕಾರ ನೀಡುತ್ತಿತ್ತು. ಆದರೆ ಇನ್ನು ಮುಂದೆ ಅದು ರದ್ದಾಗಲಿದ್ದು, ಅದರ ಬದಲಿಗೆ ಫುಡ್‌ ಕಿಟ್‌ ನೀಡುವುದಕ್ಕೆ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದಿಂದ 05 ಕೆಜಿ ಅಕ್ಕಿ ಸಿಗಲಿದ್ದು, ರಾಜ್ಯ ಸರ್ಕಾರದ ಅಕ್ಕಿಯ ಬದಲಿಗೆ ಫುಡ್‌ ಕಿಟ್‌ ಅನ್ನು ನೀಡಲಿದೆ. ಇಂದಿರಾ ಆಹಾರ ಕಿಟ್‌ನಲ್ಲಿ ಎಎವೈ ಮತ್ತು ಪಿಎಚ್ಎಚ್ ಪಡಿತರ ಫಲಾನುಭವಿಗಳಿಗೆ ತೊಗರಿ ಬೆಳೆ 2ಕೆಜಿ, […]

ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ – ಮಹಿಳೆಯರ ʼಋತುಚಕ್ರ ರಜೆʼಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ವಿವಿಧ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ತೊಡಗಿರುವ ಮಹಿಳೆಯರಿಗೆ ಇನ್ನು ಮುಂದೆ ತಿಂಗಳಿಗೆ ಒಂದು ದಿನ ಋತುಚಕ್ರದ ರಜೆ ನೀಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಮ್ಮತಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNC ಗಳು IT ಮತ್ತು ಇತರೆ ಖಾಸಗಿ ಕೈಗಾರಿಕೆ ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ […]

ಬಾಡಗ ಅಂಗನವಾಡಿ ಕೇಂದ್ರದಲ್ಲಿ ʼಪೋಷಣ್‌ ಭೀ ಪಢಾಯಿ ಭೀʼ ಕಾರ್ಯಕ್ರಮ

ಮೂರ್ನಾಡು : ಇಲ್ಲಿನ ಬಾಡಗ ಅಂಗನವಾಡಿ lkg ಕೇಂದ್ರದಲ್ಲಿ ಪೋಷನ್ ಮಾಸಾಚರಣೆ ಅಂಗವಾಗಿ ʼಪೋಷಣ್‌ ಭೀ ಪಢಾಯಿ ಭೀʼ ಕಾರ್ಯಕ್ರಮ ಜರುಗಿತು. ಮಕ್ಕಳಿಂದ ಹಣ್ಣಿನ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆಟಗಳ ಮೂಲಕ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದಂತ ಚಟುವಟಿಕೆಗಳನ್ನು ಮಾಡಿಸಲಾಯಿತು. ಜೊತೆಗೆ ಮನೆಗಳ ಸುತ್ತಮನುತ್ತ ಆರೋಗ್ಯಕರ ಹಣ್ಣಿನ ಗಿಡಗಳನ್ನು ನೆಡಲು ಪೋಷಕರಿಗೆ ಪ್ರೋತ್ಸಾಹಿಸಲಾಯಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್‌, ಕಾಂತೂರು ಮುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ […]

ದಸರಾ ಸಂಭ್ರಮಕ್ಕೆ ಕಂಟಕವಾಗುತ್ತಿದೆ ಮಂಟಪಗಳ ಸ್ಪರ್ಧೆ..!

ನಿಶ್ಚಿತವಾದ ಧ್ಯೇಯ ಸಾಧನೆ ಹಾಗೂ ಸಂಸ್ಕೃತಿ ಪ್ರಸಾರವೇ ತನ್ನ ಮುಖ್ಯ ಮೌಲಿಕ ಗುರಿಯನ್ನಾಗಿಸಿಕೊಂಡು ಆಚರಿಸಲ್ಪಡುವ ಯಾವುದೇ ಹಬ್ಬ, ಉತ್ಸವ, ಆಚರಣೆಗಳು ಶ್ರದ್ಧಾ ಭಕ್ತಿಯ ಪ್ರತಿಬಿಂಬವಾಗಿ ಸರ್ವ ಧರ್ಮೀಯರ ಮಾನ್ಯತೆಗೆ ಖಂಡಿತವಾಗಿಯೂ ಒಳಪಡುತ್ತದೆ. ಸಾಮೂಹಿಕ ಆಚರಣೆಗೆ ಒಳಪಡುವ ಯಾವುದೇ ಹಬ್ಬ, ಸಂಪ್ರದಾಯ, ಆಚರಣೆಗಳೂ ಕೂಡ ಇಂತಹ ಗುರುತರವಾದ ಜವಾಬ್ದಾರಿಯನ್ನು ಅತೀ ಮುಖ್ಯವಾಗಿ ನಿರ್ವಹಿಸಬೇಕಾಗುತ್ತದೆ. ಏಕೆಂದರೆ ಈ ಆಚರಣೆ ಕೇವಲ ಸಂಭ್ರಮ, ಮನರಂಜನೆಗಾಗಿ ಆಗಿರುವುದಿಲ್ಲ. ಆ ಮೂಲಕ ಒಂದು ಸಂಸ್ಕೃತಿಯ ಐಕ್ಯತೆ, ಒಗ್ಗಟ್ಟಿನ ಮೂಲಕ ತನ್ನ ಪ್ರತಿಷ್ಠೆ, ಅಭಿಮಾನದಿಂದ ಸಮಾಜಕ್ಕೆ […]

ಶ್ರೀಗಂಧ ಕಳ್ಳಸಾಗಣೆ – ಪತ್ರಕರ್ತ ಸೇರಿ ಇಬ್ಬರ ಬಂಧನ

ಮೂಡಿಗೆರೆ : ಶ್ರೀಗಂಧದ ತುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಮೂಡಿಗೆರೆ ವಲಯದ ಅರಣ್ಯಾಧಿಕಾರಿಗಳು ಪತ್ತೆ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ. ಮೂಡಿಗೆರೆ ಪ್ರಾದೇಶಿಕ ವಲಯ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ತುಂಡುಗಳನ್ನು ಅಕ್ರಮವಾಗಿ ಸಾಗಣೆ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಯೂಸುಫ್‌ ಹಾಗೂ ಮನ್ಸೂರ್‌ ಎಂಬಿಬ್ಬರು ಬೈಕ್‌ನಲ್ಲಿ ಗಂಧದ ತುಂಡುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಇಬ್ಬರನ್ನು ಅಧಿಕಾರಿಗಳು ಬಂದಿಸಿದ್ದು, ಬೈಕ್, ಶ್ರೀಗಂಧದ ತುಂಡು, ತುಂಡು […]

ತಾಲೂಕು ಬಂಟರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಅ.26ಕ್ಕೆ – ಆದರ್ಶ ದಂಪತಿ ಕಾರ್ಯಕ್ರಮ ಆಕರ್ಷಣೆ..!

ಮಡಿಕೇರಿ : ಮಡಿಕೇರಿ ತಾಲೂಕು ಬಂಟರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಅ.26ರಂದು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಜಿಲ್ಲಾ ಬಂಟರ ಸಂಘ, ತಾಲೂಕು ಮಹಿಳಾ ಘಟಕ, ಯುವ ಬಂಟ್ಸ್‌ ಅಸೋಸಿಯೇಷನ್‌ ಸೇರಿದಂತೆ ವಿವಿಧ ಘಟಕಗಳ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಂಟ ಸಮುದಾಯದ ಸಾಧಕರಿಗೆ, ಚುನಾಯಿತ ಜನಪ್ರತಿನಿಧಿಗಳಿಗೆ, ಹಿರಿಯ ದಂಪತಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ವಿಶೇಷ ಆಕರ್ಷಣೆಯಾಗಿ ಆದರ್ಶ ದಂಪತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಗ್ಗೆ 9.30ಕ್ಕೆ ತಾಲೂಕು ಸಂಘದ ಅಧ್ಯಕ್ಷ […]

ಅ.12ರಂದು ಕೆ. ಎಂ. ಎ. ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ

KMA

ವಿರಾಜಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025 ವಿತರಣೆ ಮತ್ತು ಸಮುದಾಯದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಇದೇ ತಿಂಗಳ 12ರಂದು ಭಾನುವಾರ ವಿರಾಜಪೇಟೆಯಲ್ಲಿ ಅಯೋಜಿಸಲಾಗಿದೆ ಎಂದು ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ತಿಳಿಸಿದ್ದಾರೆ. ಈ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಶ್ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10:30 ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ಅರಮೇರಿ ಶ್ರೀ ಕಳಂಚೇರಿ ಮಠದ […]