ಜಿಲ್ಲಾಸ್ಪತ್ರೆಯಲ್ಲಿ ರಕ್ತ ಕೊರತೆ – ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾದರಿಯಾದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ

ಮಡಿಕೇರಿ : ಕೊಡಗು ಜಿಲ್ಲಾಸ್ಪತ್ರೆಯ ರಕ್ತನಿಧಿ ಘಟಕದಲ್ಲಿ ಕೆಲವು ದಿನದಿಂದ ರಕ್ತದ ಬೇಡಿಕೆ ಹೆಚ್ಚಾಗಿದೆ. ಆದರೆ ಅಗತ್ಯ ಪ್ರಮಾಣದಲ್ಲಿ ಸಂಗ್ರಹ ಇಲ್ಲದ ಕಾರಣ ದಾನಿಗಳಿಂದ ರಕ್ತ ಕೊಡಿಸುವ ಕಾರ್ಯವನ್ನು ಅನೇಕರು ಮಾಡುತ್ತಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ದಾನಿಗಳನ್ನು ಸಂಪರ್ಕಿಸಿ ರಕ್ತ ಸಂಗ್ರಹಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಸಮಾಜಮುಖಿ ಕಾರ್ಯಕ್ಕೆ ಜಿಲ್ಲೆಯ ಪೊಲೀಸರು ಕೂಡಾ ಸಾಥ್‌ ನೀಡಿದ್ದಾರೆ. ಕಳೆದೊಂದು ವಾರದಿಂದ ಜಿಲ್ಲೆಯ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಯಂಪ್ರೇರಿತರಾಗಿ ಬಂದು ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಮಾಡಿದ್ದಾರೆ. […]

ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ – ಸರ್ಕಾರದ ವಿರುದ್ಧ ಸಂಸದ ಯದುವೀರ್‌ ಆಕ್ರೋಶ

ಮೈಸೂರು : ಇತ್ತೀಚಿನ ದಿನದಲ್ಲಿ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಹಬ್ಬದ ವಾತಾವರಣ ಈಗಲೂ ಇದೆ. ಆದರೆ ಇಲ್ಲಿ ನಡೆದ ಘಟನೆಗಳು ಕಾನೂನು ಸುವ್ಯವಸ್ಥೆ ಹೇಗಿದೆ ಅನ್ನೋದನ್ನ ತೋರಿಸುತ್ತಿದೆ. ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಯಿತು. 340 ಕೋಟಿ ರೂಪಾಯಿಯ ಡ್ರಗ್ಸ್ ಪತ್ತೆಯಾಯಿತು. ಇದನ್ನ ಮಹಾರಾಷ್ಟ್ರದ ಪೊಲೀಸರು ಪತ್ತೆ ಮಾಡಬೇಕಾಯಿತು. ಇದೀಗ ಅರಮನೆ ಬಳಿಯಲ್ಲೇ ಕೊಲೆ […]