ಕೊಡಗು ವಿವಿ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರಗೆ ʼಆನರ್‌ ಆಫ್‌ ಅಶೋಕʼ ಪ್ರಶಸ್ತಿ

ಕುಶಾಲನಗರ : ಕೊಡಗು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರರವರಿಗೆ ನವದೆಹಲಿಯ ಇಂಡಿಯಾ ಹ್ಯಾಬಿಟೆಟ್ ಸೆಂಟರ್ ವತಿಯಿಂದ ಕೊಡಮಾಡುವ ಪ್ರತಿಷ್ಠಿತ “ಆನರ್ ಆಫ್ ಅಶೋಕ ಪ್ರಶಸ್ತಿ 2025” ನೀಡಿ ಗೌರವಿಸಲಾಗಿದೆ. ನ್ಯಾಯಾಂಗ, ಪೊಲೀಸ್, ಸಾರ್ವಜನಿಕ-ಶೈಕ್ಷಣಿಕ ಆಡಳಿತ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಶ್ಲಾಘನೀಯ ಶ್ರೇಷ್ಠತೆಯನ್ನು ಪ್ರದರ್ಶಿಸಿದ ನೈಪುಣ್ಯ ಅಧಿಕಾರಿಗಳು, ಸೈನಿಕರು, ಆಡಳಿತಗಾರರು ಮತ್ತು ಶಿಕ್ಷಣ ತಜ್ಞರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಅಶೋಕ ಸಂಗಪ್ಪ ಆಲೂರ ಈ ಬಾರಿ ಭಾಜನರಾಗಿದ್ದಾರೆ. ಮಾಜಿ […]

ನಗು ನಿಲ್ಲಿಸಿದ ರಾಜು ತಾಳಿಕೋಟೆ – ಹೃದಯಾಘಾತದಿಂದ ಜನಪ್ರಿಯ ಹಾಸ್ಯನಟನ ಬಾಳ ಅಂತ್ಯ..!

ಉಡುಪಿ : ಕನ್ನಡ ರಂಗಭೂಮಿ ಹಾಗೂ ಚಿತ್ರರಂಗದ ಪ್ರಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ(58) ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೈನ್‌ ಶೆಟ್ಟಿ ನಟನೆಯ ಚಿತ್ರವೊಂದರ ಚಿತ್ರೀಕರಣಕ್ಕಾಗಿ ಉಡುಪಿಗೆ ಆಗಮಿಸಿದ್ದರು. ನಿನ್ನೆ ಚಿತ್ರೀಕರಣ ಮುಗಿಸಿ ವಿಶ್ರಾಂತಿಯಲ್ಲಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಉಡುಪಿಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಈ ಹಿಂದೊಮ್ಮೆ ಹೃದಯಾಘಾತಕ್ಕೊಳಗಾಗಿದ್ದ ಅವರಿಗೆ ಸ್ಟಂಟ್‌ ಅಳವಡಿಸಲಾಗಿತ್ತು ಎಂದು ತಿಳಿದುಬಂದಿದೆ. ವಿಜಯಪುರ ಜಿಲ್ಲೆಯ ಅವರ ಹುಟ್ಟೂರಿಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ರಾಜು ತಾಳಿಕೋಟೆ ಅವರ ಬಗ್ಗೆ ಒಂದಷ್ಟು ಮಾಹಿತಿ. […]

ಸರ್ಕಾರಿ ಸ್ಥಳದಲ್ಲಿ RSS ಚಟುವಟಿಕೆ ನಿರ್ಬಂಧ : ಪರಿಶೀಲನೆಗೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚನೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುತ್ತಾ, ಅವರ ಆರೋಗ್ಯ ಸುಧಾರಣೆಯಾಗುತ್ತಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು. ಸಚಿವ ಪ್ರಿಯಾಂಕ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಪತ್ರ […]

ಮತಗಳ್ಳತನದ ವಿರುದ್ಧ ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ – ಮಡಿಕೇರಿ ಬ್ಲಾಕ್‌ ವ್ಯಾಪ್ತಿಯಲ್ಲಿ 40 ಸಾವಿರ ಸಹಿ ಸಂಗ್ರಹಿಸುವ ಗುರಿ

ಮಡಿಕೇರಿ : ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಂಗ್ರೆಸ್‌ ಪಕ್ಷದ ವತಿಯಿಂದ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಕೊಡಗು ಜಿಲ್ಲೆಯಲ್ಲೂ ಈ ಅಭಿಯಾನ ಆರಂಭಿಸಲಾಗಿದೆ. ಮಡಿಕೇರಿ ಬ್ಲಾಕ್‌ ವ್ಯಾಪ್ತಿಯಲ್ಲಿ 40 ಸಾವಿರ ಮತದಾರರ ಸಹಿ ಸಂಗ್ರಹಿಸುವ ಗುರಿ ಇದೆ. ಬುಧವಾರದಿಂದ ಮನೆ, ಮನೆಗೆ ತೆರಳಿ ಸಹಿ ಸಂಗ್ರಹಿಸಲಾಗುವುದು ಎಂದು ಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ತಿಳಿಸಿದ್ದಾರೆ. ನೈಜ ಮತದಾರರನ್ನು ನಿಗ್ರಹಿಸಲು ಮೋಸದ ಜಾಲಗಳನ್ನು ಬಳಸಿಕೊಂಡು ಚುನಾವಣೆಯಲ್ಲಿ ಅಕ್ರಮಗಳು ನಡೆಯುತ್ತಿವೆ. […]

ವಕೀಲ ಸಿ.ಕೆ. ಪೂವಣ್ಣ ಮೇಲೆ ಹಲ್ಲೆ ಯತ್ನಕ್ಕೆ ಖಂಡನೆ – ಬಾರ್‌ ಅಸೋಸಿಯೇಷನ್‌ ಪ್ರತಿಭಟನೆ

ಮಡಿಕೇರಿ : ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಸಿ.ಕೆ. ಪೂವಣ್ಣ ಮೇಲೆ ಕೆಲವು ವ್ಯಕ್ತಿಗಳು ಹಲ್ಲೆಗೆ ಯತ್ನಿಸಿದ್ದನ್ನ ಖಂಡಿಸಿ ಜಿಲ್ಲಾದ್ಯಂತ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಕಲಾಪ ಬಹಿಷ್ಕರಿಸಿದ ವಕೀಲರು ಘಟನೆಗೆ ತಮ್ಮ ಖಂಡನೆಯನ್ನು ವ್ಯಕ್ತಪಡಿಸಿ ಕೃತ್ಯಕ್ಕೆ ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ನಿನ್ನೆ ಪೂವಣ್ಣ ಅವರ ಕಚೇರಿಗೆ ನುಗ್ಗಿದ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದರು. ಈ ಸಂಬಂಧ ವೀರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಮಡಿಕೇರಿ ನ್ಯಾಯಾಲಯದ ವಕೀಲರು ಬಾರ್‌ […]

ಬಸ್‌ಗಳಲ್ಲಿ ಎಲ್ಲಿ ನೋಡಿದ್ರೂ ಮಹಿಳೆಯರೇ… ನಾಲ್ಕು ಜನ ಗಂಡಸ್ರು ಹೋಗೋದು ಕಷ್ಟ – ಗ್ಯಾರಂಟಿ ಯೋಜನೆ ಬಗ್ಗೆ ಆರ್‌.ವಿ. ದೇಶಪಾಂಡೆ ಲೇವಡಿ..!

ಬೆಂಗಳೂರು( coorgbuzz.com ) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ಬಗ್ಗೆ ವಿಪಕ್ಷ ಬಿಜೆಪಿ ಟೀಕೆ ಮಾಡುತ್ತಲೇ ಇದೆ. ಈಗ ಈ ಸಾಲಿಗೆ ಆಡಳಿತ ಪಕ್ಷದ ಶಾಸಕರು ಕೂಡಾ ಕೈಜೋಡಿಸಿದಂತಿದೆ. ಸ್ವಪಕ್ಷೀಯರಿಂದಲೇ ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ. ದೇಶಪಾಂಡ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ತಮ್ಮದೇ ದಾಟಿಯಲ್ಲಿ ಯೋಜನೆಗಳನ್ನು ವ್ಯಂಗ್ಯವಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ದೇಶಪಾಂಡೆ, ಸರ್ಕಾರ ಜಾರಿಗೆ ತಂದಿರುವ ಯೋಜನೆ ಒಂದಾ ಎರಡಾ… ಉಚಿತ ಬಸ್‌ನಿಂದಾಗಿ ಮಹಿಳೆಯರೇ ಎಲ್ಲಿ ನೋಡಿದ್ರೂ […]

RSS ವಿರುದ್ಧ ಮುಂದುವರೆದ ಕಾಂಗ್ರೆಸ್ಸಿಗರ ಆಕ್ರೋಶ – ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ಬೆಂಬಲ…

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ವಿರುದ್ಧ ಕಾಂಗ್ರೆಸ್‌ ನಾಯಕರ ಟೀಕೆ, ವಾಗ್ದಾಳಿ ಮುಂದುವರೆದಿದೆ. ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅ.12ರಂದು ರಾಜ್ಯಾದ್ಯಂತ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು. ಲಕ್ಷಾಂತರ ಕಾರ್ಯಕರ್ತರು ಈ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗೆ ಪತ್ರಬರೆದಿದ್ದು, ಅದಕ್ಕೆ ಸರ್ಕಾರದಿಂದ ಪ್ರತಿಕ್ರಿಯೆ ಸಿಕ್ಕ ವಿಚಾರ ಬಹಿರಂಗವಾಗಿತ್ತು. ಇದಾದ ಬೆನ್ನಲ್ಲೇ ಮತ್ತೊಬ್ಬ ನಾಯಕ ದಿನೇಶ್‌ ಗುಂಡೂರಾವ್‌ ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ದಾರೆ. . ಆರ್‌ಎಸ್‌ಎಸ್ […]

ಮಡಿಕೇರಿಯಲ್ಲಿ ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ..!

ಮಡಿಕೇರಿ : ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಪಿಕಪ್‌ ವಾಹವೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಪಲಿಯಾಗಿದೆ. ಆಜಾದ್ ನಗರಕ್ಕೆ ತೆರಳುವ ಮಾರ್ಗದಲ್ಲಿ ಘಟನೆ ಸಂಭಸಿದ್ದು, ರಾಡ್‌ಗಳನ್ನು ಸಾಗಿಸುತ್ತಿದ್ದ ವಾಹನ ಇಳಿಜಾರು ಪ್ರದೇಶದಲ್ಲಿ ಚಾಲಕಮ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ.