ಅಕ್ಟೋಬರ್ 15ರಂದು ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ..!

ಮಡಿಕೇರಿ : 66/11ಕೆ.ವಿ ಪೊನ್ನಂಪೇಟೆ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್ 12 ಬೆಕ್ಕೆಸೊಡ್ಲೂರು ಫೀಡರ್‍ನಲ್ಲಿ ಅಕ್ಟೋಬರ್, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಬೆಕ್ಕೆಸೊಡ್ಲೂರು, ಬಲ್ಯಮಂಡೂರು, ಕಾನೂರು, ಕೋತೂರು, ಬೊಮ್ಮಾಡು, ನಿಡುಗುಂಬ, ವಡ್ಡರಮಾಡು, ಕಪ್ಪರಮನೆ, ಬ್ರಹ್ಮಗಿರಿ, ಕೊಟ್ಟಗೇರಿ, ಬೇಗೂರು, ಮುಗುಟಗೇರಿ, ಚಿಕ್ಕಮಂಡೂರು, ಕೋಟೂರು, ತೂಚಮಕೇರಿ, ಚಿಕ್ಕಮಂಡೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯ […]
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅಂಗನವಾಡಿ ಕಾರ್ಯಕರ್ತೆ ಮಡಿಕೇರಿ 18, ಸೋಮವಾರಪೇಟೆ 15, ಪೊನ್ನಂಪೇಟೆ 21 […]
ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಣ್ಣುವಂಡ ಕಿಶೋರ್ ನಾಚಪ್ಪ ಪುನರಾಯ್ಕೆ

ಗೋಣಿಕೊಪ್ಪ : ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಣ್ಣುವಂಡ ಕಿಶೋರ್ ನಾಚಪ್ಪ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿ ಆಯ್ಕೆ ಸಂಬಂಧ ಇಂದು ಚುನಾವಣೆ ನಿಗಧಿಯಾಗಿತ್ತು. ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಚ್ಚಮಾಡ ಅನೀಶ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಎನ್.ಎನ್. ದಿನೇಶ್, ಖಜಾಂಚಿಯಾಗಿ ವಿ.ವಿ. ಅರುಣ್ ಕುಮಾರ್, ಕಾರ್ಯದರ್ಶಿ ಮಂಡೇಡ ಎಸ್. ಅಶೋಕ್, ನಿರ್ದೇಶಕರಾಗಿ ಅಣ್ಣೀರ ಹರೀಶ್ ಮಾದಪ್ಪ, ಚಿಮ್ಮಣಮಾಡ ದರ್ಶನ್ ದೇವಯ್ಯ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ವಿ.ಕೆ. ಪ್ರತಾಪ್, ಸಹಾಯಕರಾಗಿ ಬಿ.ಇ. ಕಿರಣ್, […]
ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ, ಅವಕಾಶ ಸಿಗಬೇಕು ಅಷ್ಟೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ […]
ಉತ್ತಮ ಜೀವನ ರೂಪುಗೊಳ್ಳಲು ಎನ್‌ಎಸ್‌ಎಸ್ ಸಹಕಾರಿ – ಗಣ್ಯರ ಅಭಿಪ್ರಾಯ

ವೀರಾಜಪೇಟೆ : ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನ ರೂಪಿಸುವುದರೊಂದಿಗೆ ಅವರಲ್ಲಿರುವ ವಿಶೇಷ ಗುಣ, ಹವ್ಯಾಸಗಳನ್ನು ತೋರ್ಪಡಿಸಲು ಎನ್ ಎಸ್ ಎಸ್ ಶಿಬಿರಗಳು ಅತ್ಯುತ್ತಮ ವೇದಿಕೆಯೆಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು ಕಡಂಗದಲ್ಲಿ ಗುರುವಾರ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಹೆಚ್ಚಿನ ವಿಚಾರಗಳನ್ನು ಕಲಿಯಲು ಹಾಗೂ ಕಲಿತ ವಿಚಾರಗಳನ್ನು ಜೀವನದಲ್ಲಿ […]