RSS ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ? – ಬೆದರಿಕೆಗೆ ನಾನೂ ಹೆದರಲ್ಲ, ಖರ್ಗೆಯವರೂ ಹೆದರಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ತಮಿಳುನಾಡಿನಲ್ಲಿ ಆರ್.ಎಸ್.ಎಸ್. […]
ರೂ.73.10 ಲಕ್ಷ ಲಾಭದಲ್ಲಿ ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ

ಪೊನ್ನಂಪೇಟೆ: ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು 2024-2025 ನೇ ಸಾಲಿನಲ್ಲಿ ರೂ. 73.10 ಲಕ್ಷ ಮೊತ್ತದ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಕಾಡ್ಯಮಾಡ ಎಸ್. ಭರತ್ ತಿಳಿಸಿದ್ದಾರೆ. ಸಂಘದ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿರಿಯರು ಕಟ್ಟಿ ಬೆಳೆಸಿ ಭದ್ರಬುನಾದಿ ಹಾಕಿಕೊಟ್ಟ ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು ಸದಸ್ಯರ ಮತ್ತು ಗ್ರಾಹಕರ ನೆರವಿನಿಂದ ಉತ್ತಮವಾಗಿ ನಡೆಯುತ್ತಿದೆ. ಪ್ರಸ್ತುತ […]