ಸ್ವಚ್ಛತೆಗಾಗಿ ಸಾಮಾಜಿಕ ಜಾಲತಾಣದ ಬಳಕೆ – ವೀರಾಜಪೇಟೆ ಪುರಸಭೆ ಮಾದರಿ ನಡೆ

ವೀರಾಜಪೇಟೆ : ಕೊಡಗನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ಮುಂದಾಳತ್ವದಲ್ಲಿ ಇತ್ತೀಚೆಗೆ ಬೃಹತ್ ಸ್ವಚ್ಛತಾ ಅಭಿಯಾನ ನಡೆಸಲಾಗಿದೆ. ಇದಾದ ನಂತರ ಸಾರ್ವಜನಿಕರು, ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡಿದೆ. ʼಸುಂದರ ವಿರಾಜಪೇಟೆ-ಸ್ವಚ್ಛ ಪಟ್ಟಣʼ ಎಂಬ ಧ್ಯೇಯದೊಂದಿಗೆ ವೀರಾಜಪೇಟೆ ಪುರಸಭೆ ಕಂಡಕಂಡಲ್ಲಿ ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ʼಕ್ಲೀನ್ ವಿರಾಜಪೇಟೆʼ ಎಂಬ ಖಾತೆ ತೆರೆಯಲಾಗಿದೆ. ಈ ಅಧಿಕೃತ ಖಾತೆಯನ್ನು ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಇಂದು ಲೋಕಾರ್ಪಣೆ ಮಾಡಿದರು. ಯಾರಾದರು ಕಸ […]
ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ –ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಂದಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು […]
ಕಾವೇರಿ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ಧನ್ಯತಾ ಭಾವ ಮೂಡಿಸಿದೆ – ಯದುವೀರ್ ಒಡೆಯರ್

ಮಡಿಕೇರಿ : ಜೀವನದಿ ಕಾವೇರಿ ತೀರ್ಥೋದ್ಭವ ಸಂಭ್ರಮದಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್ ಪಾಲ್ಗೊಂಡಿದ್ದು. ಅಪರೂಪದ ಕ್ಷಣದಲ್ಲಿ ತಾನು ಭಾಗಿಯಾಗಿದ್ದರ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ನಾಡಿನ ಜೀವನದಿ, ಸಕಲ ಜೀವರಾಶಿಗಳಿಗೂ “ತಾಯಿ” ಸ್ವರೂಪಳಾದ ಕಾವೇರಿ ಮಾತೆಯ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಧನ್ಯತಾ ಭಾವ ಮೂಡಿಸಿದೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ. ಇದೊಂದು ಅಪೂರ್ವ ಕ್ಷಣ. ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಬರುತ್ತಿದ್ದಂತೆ ಧಾರ್ಮಿಕ ಭಾವನೆಗಳೂ ಉಕ್ಕುತ್ತವೆ ಎಂದಿದ್ದಾರೆ. ತೀರ್ಥೋದ್ಭವಕ್ಕೂ ಮುನ್ನ ಭಾಗಮಂಡಲದಿಂದ ತಲಕಾವೇರಿವರೆಗೆ ಪಾದಯಾತ್ರೆಯಲ್ಲಿ […]