ವಿಜಯ ವಿನಾಯಕ ದೇವಾಲಯ ವಾರ್ಷಿಕೋತ್ಸವ ಅ.23, 24ಕ್ಕೆ

ಮಡಿಕೇರಿ  : ನಗರದ ಶ್ರೀ ವಿಜಯ ವಿನಾಯಕ ದೇವಾಲಯದ ೨೭ನೇ ವಾರ್ಷಿಕೋತ್ಸವ ಕಾರ್ಯಕ್ರಮ ಅಕ್ಟೋಬರ್ ೨೩ ಮತ್ತು ೨೪ ರಂದು ನಡೆಯಲಿದೆ. ೨೩ ರಂದು ಸಂಜೆಯಿಂದ ದೈವತಾ ಕಾರ್ಯಗಳು, ಅಕ್ಟೋಬರ್ ೨೪ ರಂದು ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ ನಂತರ ಅನ್ನದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ತಿಕ ಮಾಸ ಪ್ರಯುಕ್ತ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಮಡಿಕೇರಿ : ನಗರದ ಶ್ರೀ ಓಂಕಾರೇಶ್ವರ ದೇವಾಲಯ ವತಿಯಿಂದ ಕಾರ್ತಿಕ ಮಾಸದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ಉತ್ಸವಾದಿಗಳು ಶಾಸ್ತ್ರೋಕ್ತವಾಗಿ ನಡೆಯಲಿದೆ ಎಂದು ದೇವಾಲಯದ ಅಧ್ಯಕ್ಷ ಚುಮ್ಮಿ ದೇವಯ್ಯ ತಿಳಿಸಿದ್ದಾರೆ. ಅಕ್ಟೋಬರ್ ೨೨ ರಂದು ಸಂಜೆ ೬ ಗಂಟೆಗೆ ಗೋಪೂಜೆ ನಡೆಯಲಿದೆ. ಅಕ್ಟೋಬರ್ ೨೨ ರಿಂದ ನವೆಂಬರ್ ೨ ರವರೆಗೆ ೧೨ ದಿನಗಳ ಕಾಲ ಸಂಜೆ ೬.೩೦ ಗಂಟೆಯಿಂದ ತುಳಸಿ ಪೂಜೆ ನಡೆಯಲಿದ್ದು, ತುಳಸಿ ಪೂಜೆ ಮಾಡಿಸ ಬಯಸುವ ಭಕ್ತಾದಿಗಳು ೧೦೦ ಸೇವಾ ದರ ಪಾವತಿಸಿ, ಪ್ರಸಾದ […]

ಮಡಿಕೇರಿಯಲ್ಲಿ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ – ಹುತಾತ್ಮ ಪೊಲೀಸರಿಗೆ ಗಣ್ಯರ ಗೌರವ ನಮನ

ಮಡಿಕೇರಿ : ಜಿಲ್ಲಾ ಪೊಲೀಸ್ ಘಟಕ ವತಿಯಿಂದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ಯು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ನಡೆಯಿತು. ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ ಗಣ್ಯರು ಹಾಗೂ ಅತಿಥಿಗಳು ಗೌರವ ನಮನ ಸಲ್ಲಿಸಿದರು. ಪೊಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪೆರೆಡ್ ಕಮಾಂಡರ್ ಆರ್.ಪಿ.ಗಣೇಶ್ ಅವರು ಗೌರವ ವಂದನೆ ಸಲ್ಲಿಸಿ, ಮುಖ್ಯ ಅತಿಥಿಗಳಿಂದ ಅನುಮತಿ ಪಡೆದರು. ಬಳಿಕ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ […]

Cristiano Ronaldo: ಕ್ರಿಸ್ಟಿಯಾನೋ ರೊನಾಲ್ಡೊ ಭಾರತ ಭೇಟಿ ರದ್ದು: ಕಾರಣವೇನು?

AFC Champions League -2 ಫುಟ್ಬಾಲ್ ಟೂರ್ನಿಯಲ್ಲಿ ಮಂಗಳವಾರ AFC ಗೋವಾ ಫುಟ್ಬಾಲ್ ತಂಡದ ವಿರುದ್ದ ಸೌದಿ ಅರೇಬಿಯಾದ ಅಲ್-ನಸ್ರ್ ಕ್ಲಬ್ ಪರ ಆಡಬೇಕಿದ್ದ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ(Cristiano Ronaldo) ಅವರ ಭಾರತ ಭೇಟಿ ರದ್ದುಗೊಂಡಿದೆ. ಸೋಮವಾರ ಭಾರತಕ್ಕೆ ಆಗಮಿಸಿದ ಅಲ್ ನಸ್ರ್(Al Nassr) ತಂಡದಲ್ಲಿ ರೊನಾಲ್ಡ್ ಇಲ್ಲ. ರೊನಾಲ್ಡ್ ತಮ್ಮ ಸೌದಿ ಕ್ಲಬ್ ತಂಡದೊಂದಿಗೆ ಭಾರತಕ್ಕೆ ಪ್ರವಾಸ ಕೈಗೊಳ್ಳಬೇಕಿತ್ತು.ಆದರೆ ಒಪ್ಪಂದದ ಪ್ರಕಾರ ಪಂದ್ಯ ಆಯ್ಕೆ ಮಾಡಿ ಕೊಳ್ಳುವ ಅಧಿಕಾರ ರೊನಾಲ್ಡೊ ಅವರಿಗಿರುವ ಕಾರಣ, […]

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿದೆ : ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದರು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ […]