ಕೊಡಗು ಜಿಲ್ಲೆಯಲ್ಲಿ ನಿನ್ನೆ ದಾಖಲಾದ ಮಳೆಯ ವಿವರ ಇಲ್ಲಿದೆ ನೋಡಿ…

ಮಡಿಕೇರಿ : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೫೩.೬೯ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೪.೪೧ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೨೯೯೮.೫೯ ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ ೨೯೫೩.೯೨ ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೩೮.೨೮ ಮಿ.ಮೀ. ಕಳೆದ ವರ್ಷ ಇದೇ ದಿನ ೯.೫೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೪೪೪೬.೫೧ ಮಿ.ಮೀ, ಕಳೆದ ವರ್ಷ ಇದೇ […]

ರಕ್ಷಿತಾ ಶೆಟ್ಟಿಯನ್ನು ನಿಂದಿಸಿದ ಅಶ್ವಿನಿ ಗೌಡ ವಿರುದ್ಧ ದಾಖಲಾಯ್ತು ಕೇಸ್..!‌ – ಇಲ್ಲಿದೆ ಮಾಹಿತಿ

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 12 ವಿವಿಧ ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ವಾರದ ಹಿಂದಷ್ಟೇ ಜಾಹ್ನವಿ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ ನಡುವಿನ ಗಲಾಟೆಯ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ರಾಜ್ಯಾದ್ಯಂತ ಬಿಗ್‌ಬಾಸ್‌ ವೀಕ್ಷಕರು ರಕ್ಷಿತಾ ವಿರುದ್ಧ ಮುಗಿಬಿದ್ದ ಜಾಹ್ನವಿ ಹಾಗೂ ಅಶ್ವಿನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ನಂತರ ಕಿಚ್ಚನ ಪಂಚಾಯಿತಿಯಲ್ಲಿ ಸುದೀಪ್‌ ಕೂಡಾ ಆ ಇಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ರಕ್ಷಿತಾ ಬಳಿ ಅಶ್ವಿನಿ ಕ್ಷಮೆಯನ್ನೂ ಕೇಳಿದ್ದರು. ಇದೀಗ ಹೊಸ ವಿಷಯ ಏನೆಂದರೆ ರಕ್ಷಿತಾಳನ್ನು […]

ಕೆ.ಎಂ.ಎ. ವತಿಯಿಂದ ಮುಸ್ಕಾನ್ ಸೂಫಿಗೆ ಸನ್ಮಾನ

ಪೊನ್ನಂಪೇಟೆ: ಚೊಚ್ಚಲ ಕೃತಿಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು ಸಾಧನೆಗೈದ ದುದ್ದಿಯಂಡ ಮುಸ್ಕಾನ್ ಸೂಫಿ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಸನ್ಮಾನಿಸಲಾಯಿತು. ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಶ್ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಕೆಎಂಎ ಪ್ರತಿಭಾ ಪುರಸ್ಕಾರ-2025 ವಿತರಣೆ ಮತ್ತು ಸನ್ಮಾನ ಸಮಾರಂಭದಲ್ಲಿ ಮುಸ್ಕಾನ್ ಸೂಫಿ ಅವರನ್ನು ಸಂಸ್ಥೆಯ ಪರವಾಗಿ ಸಾಂಪ್ರದಾಯಿಕ ಶೈಲಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಆರಂಭದಿಂದಲೇ ಇಂಗ್ಲೀಷ್ ಸಾಹಿತ್ಯದಲ್ಲಿ ಆಸಕ್ತಿ […]

ಹುಲಿತಾಳ : ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಹಾನಿ

ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧೆಡೆ ನಿನ್ನೆ ಸಂಜೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಸಣ್ಣ ಪುಟ್ಟ ಅನಾಹುತ ಸಂಭವಿಸಿದ ವರದಿಯಾಗಿದೆ. ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದ ಭಾಗಶಃ ಹಾನಿಯಾಗಿದೆ. ಇಲ್ಲಿನ ಎಚ್‌.ಟಿ. ಜಾನಕಿ ಎಂಬವರ ಮನೆಯ ಮುಂಭಾಗದ ಕೋಣೆಯ ಗೋಡೆ ರಾತ್ರಿ 8.30ರ ವೇಳೆಗೆ ಕುಸಿದಿದೆ. ಮನೆಯಲ್ಲಿ ಜನ ಇದ್ದರಾದರೂ, ಒಳ ಭಾಗದಲ್ಲಿದ್ದ ಕಾರಣ ಯಾರಿಗೂ ಸಮಸ್ಯೆಯಾಗಿಲ್ಲ. ಆದರೆ ಮನೆಯೊಳಗಿದ್ದ ವಸ್ತುಗಳು ಜಖಂಗೊಂಡಿದ್ದು, ಉಳಿದ ಕೋಣೆಗಳ ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯ ಪಂಚಾಯಿತಿಯವರು […]

ಕಾಂತೂರು ಮೂರ್ನಾಡು : ಜಲ್‌ ಜೀವನ್‌ ಮಿಷನ್‌ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

ಮಡಿಕೇರಿ : ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ಅ.24ರಂದು ನಡೆಯಬೇಕಿದ್ದ ಜಲ್‌ಜೀವನ್‌ ಮಿಷನ್‌ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. 24ರಂದು ಕಿಗ್ಗಾಲು ಗ್ರಾಮದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಕಾರ್ಯಕ್ರಮ ಮುಂದೂಡಲಾಗಿದ್ದು, ಮಳೆ ಕಡಿಮೆಯಾದ ಸಂದರ್ಭದಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಆ ದಿನಾಂಕವನ್ನು ಮುಂದಿನ ದಿನದಲ್ಲಿ ತಿಳಿಸಲಾಗುವುದೆಂದು ಪಂಚಾಯಿತಿ ಪ್ರಕಟಣೆ ತಿಳಿಸಿದೆ.