ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ..!

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಚರ್ಚೆಯಲ್ಲಿದೆ. ಸರ್ಕಾರದ ಎರಡೂವರೆ ವರ್ಷ ಅವಧಿ ಪೂರ್ಣಗೊಂಡ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮುಂದಿನ 05 ವರ್ಷ ನಾನೇ ಮುಖ್ಯಮಂತ್ರಿ ಅಂತ ಎಲ್ಲಾ ಕಡೆ ಹೇಳುತ್ತಾ ಬರುತ್ತಿದ್ದರು ಸಿದ್ದರಾಮಯ್ಯ. ಆದರೆ ಇವತ್ತು ಮಂಗಳೂರಿನಲ್ಲಿ ಅವರಿಂದ ಬಂದ ಪ್ರತಿಕ್ರಿಯೆ ಅಚ್ಚರಿ ಹುಟ್ಟಿಸಿದೆ. ಮುಂದೆ ನೀವೇ ಮುಖ್ಯಮಂತ್ರಿಯಾಗಿರುತ್ತೀರಾ ಅಂತ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ […]
ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧFIR – ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು : ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು. *ಎಸ್ ಐ ಟಿ ವರದಿ* […]
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಉಪಾಧ್ಯಕ್ಷ ಸ್ಥಾನ ಆಕಾಂಕ್ಷಿ ರಮೇಶ್ ಕುಟ್ಟಪ್ಪ ನಾಮಪತ್ರ ಸಲ್ಲಿಕೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಜ್ಜಮಾಡ ರಮೇಶ್ ಕುಟ್ಟಪ್ಪ ನಾಮಪತ್ರ ಸಲ್ಲಿಸಿದ್ದಾರೆ. 2022- 25ನೇ ಸಾಲಿನಲ್ಲಿ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ಇವರು ಇದೀಗ ಎರಡನೇ ಅವಧಿಗೆ ಆಕಾಂಕ್ಷಿಯಾಗಿ ಸ್ಪರ್ಧಿಸಿದ್ದಾರೆ. 25 ವರ್ಷದಿಂದ ಪತ್ರಕರ್ತ ವೃತ್ತಿಯಲ್ಲಿರುವ ಇವರು ವಿವಿಧ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸಂಘಟನಾತ್ಮಕವಾಗಿಯೂ ಸಕ್ರಿಯರಾಗಿರುವ ಇವರು ಎರಡು ಅವಧಿಗೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ, ಎರಡು […]
ಬೀದಿ ಶ್ವಾನಗಳ ಹಾವಳಿ – ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್..!

ನವದೆಹಲಿ : ಇತ್ತೀಚಿನ ದಿನದಲ್ಲಿ ಬೀದಿ ಶ್ವಾನಗಳ ಹಾವಳಿ ಮಿತಿ ಮೀರಿದೆ. ಈ ಸಮಸ್ಯೆ ಇಂಥದ್ದೇ ಪ್ರದೇಶಕ್ಕೆ ಸೀಮಿತ ಅಂತ ಹೇಳುವುದಕ್ಕಾಗಲ್ಲ. ದೇಶದ ಉದ್ದಗಲಕ್ಕೂ ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಈ ವಿಚಾರವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಬೀದಿ ಶ್ವಾನಗಳ ಹಾವಳಿ ಹೆಚ್ಚಾದ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ, ಎಲ್ಲಾ ರಾಜ್ಯಗಳಿಂದಲೂ ಬೀದಿ ಶ್ವಾನಗಳ ದಾಳಿ ಬಗ್ಗೆ ವರದಿಗಳು, ದೂರುಗಳು ಬರುತ್ತಿವೆ ಎಂದು ಆತಂಕ […]
ಕರ್ನಾಟಕದ ಕಾಫಿಗೆ ಪ್ರಧಾನಿ ಮೆಚ್ಚುಗೆ – ಮನ್ ಕೀ ಬಾತ್‌ನಲ್ಲಿ ಕೊಡಗಿನ ಕಾಫಿಯನ್ನು ಉಲ್ಲೇಖಿಸಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ತಿಂಗಳ ʼಮನದ ಮಾತುʼ ಕಾರ್ಯಕ್ರಮದಲ್ಲಿ ದೇಶದ ವೈಶಿಷ್ಟ್ಯತೆಯನ್ನು ಉಲ್ಲೇಖಿಸುತ್ತಾ ಇರುತ್ತಾರೆ. ಈ ಬಾರಿ ಕಾಫಿ ಬಗ್ಗೆ ಪ್ರಸ್ತಾಪಿಸುತ್ತಾ ಕೊಡಗು ಜಿಲ್ಲೆಯ ಕೊಡುಗೆಯನ್ನು ಕೊಂಡಾಡಿದ್ದಾರೆ. ಅ.26ರಂದು ಪ್ರಸಾರವಾದ ಮನ್ ಕೀ ಬಾತ್ 127ನೇ ಸಂಚಿಕೆಯಲ್ಲಿ, ದಕ್ಷಿಣ ಭಾರತದಲ್ಲಿ ಬೆಳೆಯುವ ಕಾಫಿಯ ವಿಶೇಷತೆ ಬಗ್ಗೆ ಮಾತನಾಡಿದರು. ದೇಶದ ಒಟ್ಟು ಕಾಫಿ ಉತ್ಪನ್ನದ ಪೈಕಿ ಶೇ 70ರಷ್ಟನ್ನು ಕರ್ನಾಟಕದಲ್ಲೇ ಬೆಳೆಯಲಾಗುತ್ತಿದೆ. ನಂತರದ ಸ್ಥಾನದಲ್ಲಿ ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಒಡಿಶಾ ಇದೆ. ದೇಶದಲ್ಲಿ […]