ಮಹಿಳಾ ವಿಶ್ವಕಪ್ ಕ್ರಿಕೆಟ್ : ಆಸ್ಟ್ರೇಲಿಯಾವನ್ನು ಮಣಿಸಿ ವಿಶ್ವಕಪ್ ಫೈನಲ್‌ಗೆ ಲಗ್ಗೆಯಿಟ್ಟ ಭಾರತದ ವನಿತೆಯರು..!

ಮುಂಬೈ : ಜೆಮಿಮಾ ರೋಡ್ರಿಗಸ್ ಅವರ ಸಮಯೋಚಿತ ಶತಕದ ನೆರವಿನಿಂದ ಬಲಿಷ್ಠ ಆಸ್ಟ್ರೇಲಿಯಾವನ್ನು ಸೆಮಿಫೈನಲ್‌ನಲ್ಲಿ ಮಣಿಸುವ ಮೂಲಕ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪ್ರವೇಶಿಸಿದೆ. ಮುಂಬೈನ ಡಿ.ವೈ. ಪಾಟೀಲ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಭಾರತದ ವನಿತೆಯರು 05 ವಿಕೆಟ್‌ನಿಂದ ಮಣಿಸಿದರು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯ 338 ರನ್‌ಗೆ ಆಲೌಟ್ ಆಗಿತ್ತು. 339 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. […]
ಅ.31, ನ.01ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅಕ್ಟೋಬರ್ 31 ಮತ್ತು ನವೆಂಬರ್ 01ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 31 ರಂದು ಮಧ್ಯಾಹ್ನ 03 ಗಂಟೆಗೆ ನಾಗರಹೊಳೆಯಲ್ಲಿ ಕೊಡಗು ಜಿಲ್ಲಾಡಳಿತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ‘ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಕಟ್ಟಡ ನವೀಕರಣ ಕಾಮಗಾರಿ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 05 ಗಂಟೆಗೆ ವಿರಾಜಪೇಟೆ […]
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅನು ಕಾರ್ಯಪ್ಪ ಅವಿರೋಧ ಆಯ್ಕೆ

ಮಡಿಕೇರಿ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ)ದ ಅಧ್ಯಕ್ಷರಾಗಿ ಬಾಚರಣಿಯಂಡ ಅನು ಕಾರ್ಯಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಯಾಗಿ ಬೇರೆ ಯಾರೂ ಸ್ಪರ್ಧಿಸದ ಕಾರಣ ಅನು ಕಾರ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅನು ಕಾರ್ಯಪ್ಪ ಹಲವು ವರ್ಷದಿಂದ ಪತ್ರಿಕೋದ್ಯಮದಲ್ಲಿದ್ದು, ಪ್ರಸ್ತುತ ರಿಪಬ್ಲಿಕ್ ಕನ್ನಡ ವಾಹಿನಿಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜೆ. ರಾಕೇಶ್, ಉಪಾಧ್ಯಕ್ಷರಾಗಿ ನವೀನ್ ಸುವರ್ಣ, ವನಿತಾ ಚಂದ್ರಮೋಹನ್, ಎ.ಎನ್.ವಾಸು, ಕಾರ್ಯದರ್ಶಿಗಳಾಗಿ ಪಬ್ಲಿಕ್ ಟಿವಿ ಮಲ್ಲಿಕಾರ್ಜುನ್, ರಿಜ್ವಾನ್ ಹುಸೇನ್, ಚೆರಿಯಮನೆ ಸುರೇಶ್ […]
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧ ಆಯ್ಕೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕೊಡಗಿನ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನಲ್ಲೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ವಿವಿಧ ದಿನಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಣೆ ಮಾಡಿದ ಅನುಭವ ಇರುವ ರಮೇಶ್ ಕುಟ್ಟಪ್ಪ, ಪ್ರಸ್ತುತ ಪ್ರತಿನಿಧಿ ದಿನಪತ್ರಿಕೆ ಸ್ಥಾನಿಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ರಮೇಶ್ ಕುಟ್ಟಪ್ಪ ಅವರಿಗೆ ಕೂರ್ಗ್ ಬಝ್ ಬಳಗದ ವತಿಯಿಂದ ಅಭಿನಂದನೆಗಳು.
ಮಡಿಕೇರಿ : ಚೈನ್‌ಗೇಟ್ ಬಳಿ ನೂತನ ಪ್ರಯಾಣಿಕರ ತಂಗುದಾಣ, ಬಾಟಲ್ ಡ್ರಾಪ್ ಲೋಕಾರ್ಪಣೆ

ಮಡಿಕೇರಿ : ಲಯನ್ಸ್ ಕ್ಲಬ್ ಹಾಗೂ ಮಡಿಕೇರಿ ಶಾಸಕ ಮಂತರ್ ಗೌಡ ಅವರ ವಿಶೇಷ ಅನುದಾನದಲ್ಲಿ ವಾರ್ಡ್ ನಂ.6ರ ಚೈನ್ ಗೇಟ್ ಬಳಿ ನಿರ್ಮಾಣಗೊಂಡಿರುವ ಪ್ರಯಾಣಿಕರ ತಂಗುದಾಣದ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು. ಶಾಸಕ ಮಂತರ್ ಗೌಡ ತಂಗುದಾಣವನ್ನು ಉದ್ಘಾಟಿಸಿದರು. 3 ಲಕ್ಷ ರೂ. ವೆಚ್ಚದಲ್ಲಿ ತಂಗುದಾಣ ನಿರ್ಮಿಸಲಾಗಿದೆ. ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಪಕ್ಕದಲ್ಲೇ ಅಳವಡಿಸಲಾಗಿರುವ ಬಾಟಲ್ ಡ್ರಾಪ್ ಒಳಗೆ ಬಾಟಲಿಗಳನ್ನು ಹಾಕುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು. ಲಯನ್ಸ್ ಸಂಸ್ಥೆಯ ಗವರ್ನರ್ ಅರವಿಂದ್, […]