ರಾಜ್ಯದಲ್ಲಿ ನವೆಂಬರ್ ಕ್ರಾಂತಿ – ಸಿಎಂ ಬದಲಾವಣೆ..? – ಎ.ಎಸ್. ಪೊನ್ನಣ್ಣ ಹೇಳಿದ್ದೇನು..?

ಮಡಿಕೇರಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸಿಎಂ ಬದಲಾವಣೆಯ ಚರ್ಚೆಯೇ ಅಪ್ರಸ್ತುತ ಎಂದು ಹೇಳಿದ್ದಾರೆ. ನವೆಂಬರ್ ಕ್ರಾಂತಿ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಂಪುಟ ಪುನಾರಚನೆಯನ್ನೇ ‘ಕ್ರಾಂತಿ’ ಅಂತ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅಪ್ರಸ್ತುತ, ಅನಗತ್ಯ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಡೆದಿಲ್ಲ. ವರಿಷ್ಠರು ಶಾಸಕರ […]
ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ – ಮಡಿಕೇರಿಯಲ್ಲಿ ಬಿಜೆಪಿಯಿಂದ ʼಏಕತಾ ನಡಿಗೆʼ

ಮಡಿಕೇರಿ : ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗಿದ್ದು, ಮಡಿಕೇರಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ‘ಏಕತಾ ಯಾತ್ರೆ’ ನಡೆಯಿತು. ದೇಶವನ್ನು ವಿಭಜಿಸುತ್ತಿರುವ ಶಕ್ತಿಗಳು ವಿಜೃಂಭಿಸುತ್ತಿರುವ ಈ ಸಮಯದಲ್ಲಿ ದೇಶದ ಏಕತೆ, ಸಮಗ್ರತೆ ಬಗ್ಗೆ ಯುವ ಜನರಲ್ಲಿ ಅರಿವು ಮೂಡಿಸುವುದು ಈ ಯಾತ್ರೆಯ ಉದ್ದೇಶವಾಗಿದೆ ಎಂದು ಪಕ್ಷದ ಪ್ರಮುಖರು ಹೇಳಿದರು. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಿಂದ ಆರಂಭವಾದ ಕಾಲ್ನಡಿಗೆ ಜಾಥಾಗೆ ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ ಹಾಗೂ […]
ಬುರುಡೆ ಗ್ಯಾಂಗ್ ವಿರುದ್ಧ SIT ಕೇಸ್ ದಾಖಲಿಸಿ, ಬಂಧಿಸಲಿ – ಅಪ್ಪಚ್ಚು ರಂಜನ್ ಆಗ್ರಹ..!

ಮಡಿಕೇರಿ : ಧರ್ಮಸ್ಥಳ ಪ್ರಕರಣ ವಿಚಾರವಾಗಿ ಬುರುಡೆ ಗ್ಯಾಂಗ್‌ಗೆ ತಪ್ಪಿನ ಅರಿವಾಗಿದೆ. ಹಾಗಾಗಿ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಹಾಕಿದೆ ಎಂದು ಮಾಜಿ ಶಾಸಕ ಮಂಡೇಪಂಡ ಅಪ್ಪಚ್ಚು ರಂಜನ್ ಹೇಳಿದರು. ಮಡಿಕೇರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬುರುಡೆ ಗ್ಯಾಂಗ್ ಧರ್ಮಸ್ಥಳದ ಖ್ಯಾತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಬುರುಡೆ ಗ್ಯಾಂಗ್ ಹುನ್ನಾರ ಮಾಡಿತ್ತು. ಅದೇ ತಮ್ಮ ಪಾಲಿಗೆ ಉರುಳಾಗ್ತಿದ್ದಂತೆ ಯೂಟರ್ನ್ ಹೊಡೆದಿದೆ. ಸುಳ್ಳು ಪ್ರಕರಣ ದಾಖಲಿಸಿದ್ರೆ ೧೦ ವರ್ಷ ಕಠಿಣ ಶಿಕ್ಷೆ ಇದೆ ಎಂಬುದು ಅರಿವಾಗಿ ಮೂಲ […]
ಎಚ್.ವೈ. ಮೇಟಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

ಬೆಂಗಳೂರು : ಮಾಜಿ ಸಚಿವ ಎಚ್.ವೈ. ಮೇಟಿ ಅನಾರೋಗ್ಯದಿಂದಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಮೇಟಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು.
ಕೊಡಗಿನ ಡಾ. ನೆಲ್ಲಮಕ್ಕಡ ಬಬಿನಾ, ವಿಜಯಲಕ್ಷ್ಮೀ ಸಿಂಗ್ ಸೇರಿ 70 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು : 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಕೊಡಗಿನ ಡಾ. ನೆಲ್ಲಮಕ್ಕಡ ಬಬಿನಾ ಮತ್ತು ಸಿನೆಮಾ ರಂಗದಲ್ಲಿ ವಿಜಯಲಕ್ಷ್ಮಿಸಿಂಗ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದರು. ನವೆಂಬರ್ 1ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು […]