ಸಂಪುಟ ಪುನಾರಚನೆ ವಿಚಾರ – ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಬೋಸರಾಜ್..!

ಮಡಿಕೇರಿ : ಸಚಿವ ಸಂಪುಟ ಪುನಾರಚನೆಯಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿದ್ದು, ಅಗತ್ಯ ಬಿದ್ದಲ್ಲಿ ಸಚಿವ ಸ್ಥಾನ ಬಿಡಲು ಎಲ್ಲರೂ ಸಿದ್ದರಿದ್ದೇವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್ ಹೇಳಿದರು. ಮಡಿಕೇರಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪ್ರಬುದ್ಧರಿದ್ದಾರೆ. ಕರ್ನಾಟಕಕ್ಕೆ ಹಾಗೂ ಕಾಂಗ್ರೆಸ್‌ಗೆ ಇಬ್ಬರ ಅಗತ್ಯತೆ ಇದೆ. ಸಂಪುಟ ಪುನಾರಚನೆ ವಿಚಾರದಲ್ಲಿ ಹೈಕಮಾಂಡ್ ಏನು ಹೇಳುತ್ತದೆಯೋ ಹಾಗೆ ನಡೆದುಕೊಳ್ಳುತ್ತೇವೆಂದರು. 140 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ನಲ್ಲಿ ಎಲ್ಲಾ ಮುಖ್ಯ ತೀರ್ಮಾನಗಳನ್ನು ಹೈಕಮಾಂಡ್‌ ತೆಗೆದುಕೊಳ್ಳುತ್ತದೆ. ಹಿಂದಿನಿಂದಲೂ ಬಂದ ಸಂಪ್ರದಾಯ. […]

ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ – ಅಜ್ಜಮಾಡ ರಮೇಶ್‌ ಕುಟ್ಟಪ್ಪರಿಗೆ Coorg Buzz ಬಳಗದಿಂದ ಸನ್ಮಾನ

ಮಡಿಕೇರಿ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಕೊಡಗಿನ ಹಿರಿಯ ಪತ್ರಕರ್ತ, ಪ್ರತಿನಿಧಿ ಪತ್ರಿಕೆಯ ಸ್ಥಾನಿಕ ಸಂಪಾದಕ ಅಜ್ಜಮಾಡ ರಮೇಶ್‌ ಕುಟ್ಟಪ್ಪ ಅವರಿಗೆ Coorg Buzz ಬಳಗದಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಕೂರ್ಗ್‌ ಬಝ್‌ ಸ್ಟುಡಿಯೋದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಳಗದ ಸದಸ್ಯರು ಫಲ ತಾಂಬೂಲ ನೀಡಿ, ಶಾಲು ಹೊದಿಸಿ ಅಭಿನಂದಿಸಿದರು. ರಮೇಶ್‌ ಕುಟ್ಟಪ್ಪ ಕಳೆದ ಅವಧಿಯಲ್ಲೂ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಅವಧಿಗೆ ಸ್ಪರ್ಧೆ ಬಯಸಿ ಸ್ಪರ್ಧಿಸಿದ್ದು, ಪ್ರತಿಸ್ಪರ್ಧಿಗಳು ಇಲ್ಲದ […]

ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲರ ಪಾತ್ರ ಮಹತ್ವದ್ದು – ಬೆನೆಡಿಕ್ಟ್ ಆರ್ ಸಲ್ದಾನ

ಮಡಿಕೇರಿ : ವಿವಿಧ ಪ್ರಾಂತ್ಯವಾಗಿ ಹರಿದು ಹಂಚಿ ಹೋಗಿದ್ದ ದೇಶವನ್ನು ಒಗ್ಗೂಡಿಸಿ ಏಕತೆಯ ಮೂಲಕ ಬಲಿಷ್ಠ ಭಾರತ ದೇಶವನ್ನು ಕಟ್ಟುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಬಹಳ ಮಹತ್ವದ ಪಾತ್ರವನ್ನು ವಹಿಸಿದ್ದರು ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ನಡೆದ ಏಕತಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಉಕ್ಕಿನ ಮನುಷ್ಯ ಪಟೇಲರು ದೇಶವನ್ನು ಒಗ್ಗೂಡಿಸಲು ಪಟ್ಟ ಶ್ರಮದ ಪ್ರತಿಫಲವಾಗಿ ನಾವಿಂದು ಒಗ್ಗೂಡಿದ ಭಾರತವನ್ನು ಕಾಣುತ್ತಿದ್ದೇವೆ. ಅವರು ಪಟ್ಟ ಶ್ರಮಕ್ಕೆ ದೇಶವಿಂದು […]