ಅರಣ್ಯ ಸಚಿವರು ನಿಮ್ಹಾನ್ಸ್‌ನಿಂದ ತಪ್ಪಿಸಿಕೊಂಡು ಬಂದಿದ್ದಾರಾ ? – ಮಾಜಿ ಸಚಿವ ಅಪ್ಪಚ್ಚು ರಂಜನ್‌ ಆಕ್ರೋಶ..!

ಸಿದ್ದಾಪುರ : ಅರಣ್ಯ ಸಚಿವರು ಒತ್ತುವರಿ ವಿಚಾರದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದು, ಅವರು ನಿಮ್ಹಾನ್ಸ್‌ನಿಂದ ತಪ್ಪಿಸಿಕೊಂಡು ಬಂದಿದ್ದಾರಾ ಎಂಬ ಸಂಶಯ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಲ್ಯಹುದಿಕೇರಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಚಿವರು ಇತ್ತೀಚೆಗೆ ನೂತನ ಆದೇಶ ನೀಡಿರುವ ಪ್ರಕಾರ 1980 ರಿಂದ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ವಾಸವಿರುವವರು ಕೂಡಲೇ ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು ಹೇಳಿದ್ದಾರೆ. ಇದು ಬಡವರನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ರಯತ್ನವಾಗಿದೆ. ಬಡವರ […]

ಕೊಡವ ಮುಸ್ಲಿಂ ಸ್ಪೋರ್ಟ್ಸ್‌ ಅಕಾಡೆಮಿ ನಿಯೋಗದಿಂದ ಸಿ.ಎಸ್.‌ ಅರುಣ್‌ ಮಾಚಯ್ಯ ಭೇಟಿ

ಪೊನ್ನಂಪೇಟೆ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಲಾಯಿತು. ಅಧ್ಯಕ್ಷ ಆಲೀರ ರಶೀದ್ ನೇತೃತ್ವದ ನಿಯೋಗ ಗೋಣಿಕೊಪ್ಪಲಿನ ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿತು. ಜೊತೆಗೆ ಸಂಸ್ಥೆಯ ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ಪಡೆಯಿತು. ಕೆ.ಎಂ.ಎಸ್.ಎ. ಅಧ್ಯಕ್ಷ ರಶೀದ್ ಮಾತನಾಡಿ, ಸಂಸ್ಥೆ ಕ್ರೀಡಾ ಚಟುವಟಿಕೆಗಳ […]