ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹುಲ್ಲಪ್ಪ ಯಮನಪ್ಪ ಮೇಟಿ@H.Y. ಮೇಟಿ(79) ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದಾಗಿ ಕೆಲವು ದಿನದ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾಗಿದ್ದಾರೆ. ಎರಡು ದಿನದ ಹಿಂದೆ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
Crime News : ಪತ್ನಿಯನ್ನು ಹೊಡೆದು ಕೊಂದ ಕ್ರೂರಿ ಪತಿ..!

ಸುಂಟಿಕೊಪ್ಪ : ಪತ್ನಿಯನ್ನು ಪತಿ ಹೊಡೆದು ಹತ್ಯೆಗೈದಿರುವ ಘಟನೆ ಕೊಡಗರಹಳ್ಳಿ ಬಳಿಯ ಅಂದಗೋವೆಯಲ್ಲಿ ನಡೆದಿದೆ. ಲತಾ(45) ಪತಿಯಿಂದ ಹತ್ಯೆಯಾದ ಮಹಿಳೆ. ಅಂದಗೋವೆಯ ಎಸ್ಟೇಟ್ ಒಂದರ ಲೈನ್‌ಮನೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಮುತ್ತ(50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಗಂಡ ಹಂಡತಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿ ಲತಾ ಮೇಲೆ ಮುತ್ತ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ವಿಚಾರ ತಿಳಿದು ಹೆಚ್ಚುವರಿ […]