Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ವಿರಾಜಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ಪಂಜರಪೇಟೆ ಹಾಗೂ ಹೆಗ್ಗಳ ಫೀಡರ್‍ಗಳಲ್ಲಿ ನವೆಂಬರ್, 06 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣದ ತೆಲುಗರ ಬೀದಿ, ನೆಹರು ನಗರ, ಗೋಣಿಕೊಪ್ಪ ರಸ್ತೆ, ಶಾಂತಿ ನಗರ, ವಿದ್ಯಾನಗರ, ನಿಸರ್ಗ ಬಡಾವಣೆ, ಮೀನುಪೇಟೆ, ಖಾಸಗಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಆರ್ಜಿ, ಬೇಟೋಳಿ, ಕಲ್ಲುಬಾಣೆ, ಹೆಗ್ಗಳ, ರಾಮನಗರ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸೋಮವಾರಪೇಟೆ 66/11 […]

ಸಿ&ಡಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ – ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ

ಬೆಂಗಳೂರು : ಸಿ ಅಂಡ್ ಡಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸಲಾಗುವುದೆಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಇಂದು ತಮ್ಮನ್ನು ಭೇಟಿಯಾದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನೊಳಗೊಂಡ ನಿಯೋಗದ ಜೊತೆ ಚರ್ಚಿಸಿದ ಬಳಿಕ ಅವರು ಪ್ರತಿಕ್ರಿಯಿಸಿದರು. ಸಿ ಅಂಡ್ ಡಿ ಜಾಗದ ವಿಚಾರವಾಗಿ ಜಿಲ್ಲೆಯ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ […]

ಉದ್ದೇಶಿತ ಬಂಟರ ಭವನ ನಿರ್ಮಾಣ ಜಾಗದಲ್ಲಿ ಯುವ ಬಂಟ್ಸ್‌ ಅಸೋಸಿಯೇಷನ್‌ ವತಿಯಿಂದ ಶ್ರಮದಾನ

ಮಡಿಕೇರಿ : ಕೊಡಗು ಜಿಲ್ಲಾ ಬಂಟರ ಸಂಘಕ್ಕೆ ಸೇರಿದ ಜಾಗದಲ್ಲಿ ಯುವ ಬಂಟ್ಸ್‌ ಅಸೋಸಿಯೇಷನ್‌ ವತಿಯಿಂದ ಶ್ರಮದಾನ ಮಾಡಲಾಯಿತು. ಹೆಸರಾಂತ ಉದ್ಯಮಿ ಡಾ ಪ್ರೇಮನಾಥ್‌ ಪೂಂಜಾ ಅವರು ಮಡಿಕೇರಿ ಹೊರವಲಯದ ಅಬ್ಬಿಫಾಲ್ಸ್‌ ಮಾರ್ಗದಲ್ಲಿರುವ ತಮ್ಮ ಜಮೀನಿನಲ್ಲಿ ಅರ್ಧ ಎಕ್ರೆ ಜಾಗವನ್ನು ಬಂಟರ ಭವನ ನಿರ್ಮಾಣಕ್ಕಾಗಿ ನೀಡಿದ್ದರು. ಹಲವು ವರ್ಷಗಳಿಂದ ಅದು ಪಾಳು ಬಿದ್ದಿತ್ತು. ಇದೀಗ ಜಿಲ್ಲಾ ಬಂಟರ ಸಂಘದ ವತಿಯಿಂದ ಬಂಟರ ಭವನ ಟ್ರಸ್ಟ್‌ ಸಹಯೋಗದಲ್ಲಿ ಅಲ್ಲಿ ಭವನ ನಿರ್ಮಾಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಹೀಗಾಗಿ ಆ ಜಾಗದಲ್ಲಿ […]

ಮಿಷನ್ ವಾತ್ಸಲ್ಯ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ವೆಂಕಟ್ ರಾಜಾ ಸೂಚನೆ

ಮಿಷನ್ ವಾತ್ಸಲ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ಜಿಲ್ಲಾ ಮಟ್ಟದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಗಳವಾರ ನಡೆದ ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಾದ ವಿಶೇಷ ಪಾಲನಾ ಯೋಜನೆ, ಪ್ರಾಯೋಜಕತ್ವ ಕಾರ್ಯಕ್ರಮ, ದತ್ತು ಕಾರ್ಯಕ್ರಮ, ಉಪಕಾರ ಯೋಜನೆ, ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಮತ್ತಿತರ ಯೋಜನೆಗಳ ಪ್ರಗತಿಯ […]