ʼವೃಕ್ಷಮಾತೆʼ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ – 114 ವರ್ಷದ ತುಂಬು ಜೀವನಕ್ಕೆ ವಿದಾಯ ಹೇಳಿದ ಪದ್ಮಶ್ರೀ ಪುರಸ್ಕೃತ ಸಾಧಕಿ

ಬೆಂಗಳೂರು : ‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ(114) ಅವರು ಇಂದು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳು ತಿಮ್ಮಕ್ಕ ಅವರ ಮುಡಿಗೇರಿತ್ತು. ಮರಗಳನ್ನೇ ತನ್ನ ಮಕ್ಕಳಂತೆ ಕಂಡು, ನಾಡಿನಲ್ಲಿ ಸಾವಿರಾರು ಮರಗಳನ್ನು ನೆಟ್ಟು ಮಾದರಿಯಾದ ಅವರ ನಿಧನಕ್ಕೆ ನಾಡಿನ ವಿವಿಧ ವರ್ಗದ ಜನ ಸಂತಾಪ ಸೂಚಿಸಿದ್ದಾರೆ. ಇಂದಿನ ಪೀಳಿಗೆಗೆ ಇವರ ಜೀವನ […]

ಕನ್ನಡಪ್ರಭ ಪತ್ರಿಕೆ ವತಿಯಿಂದ ಪೊನ್ನಂಪೇಟೆ, ವೀರಾಜಪೇಟೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ – ಉತ್ಸಾಹದಿಂದ ಪಾಲ್ಗೊಂಡ ನೂರಕ್ಕೂ ಅಧಿಕ ವಿದ್ಯಾರ್ಥಿಗಳು

ವಿರಾಜಪೇಟೆ : ಮಕ್ಕಳ ಪ್ರತಿಭೆ ಅನಾವರಣಕ್ಕೆ ಚಿತ್ರಕಲೆಯಂತಹ ಸ್ಪರ್ಧಾ ಕಾರ್ಯಕ್ರಮಗಳು ಅವಶ್ಯಕವಾಗಿದೆ. ತೀರಾ ಬಡತನದಲ್ಲಿ ಬೆಳೆದು ಬಂದವರು ಇಂದು ಸಾಕಷ್ಟು ಸಾಧನೆ ಮಾಡಿದ್ದಾರೆ. ಅವರಂತೆ ವಿದ್ಯಾರ್ಥಿಗಳು ಸಾಧನೆ ಮಾಡಬೇಕೆಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿ ಅಧ್ಯಕ್ಷ ಪೂಜಾ ಸಜೇಶ್ ಹೇಳಿದರು. ಕನ್ನಡಪ್ರಭ‌‌ ಪತ್ರಿಕೆ ವತಿಯಿಂದ ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಗುರುವಾರ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ವಿದ್ಯಾರ್ಥಿಗಳಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. […]