ಸಂಸ್ಕೃತಿಯನ್ನು ಮರೆಯುವುದು ದೇಶವನ್ನು ವಿನಾಶದ ಕಡೆ ಕೊಂಡೊಯ್ದಂತೆ – ಹಿರಿಯ ಸಿವಿಲ್‌ ನ್ಯಾಯಾಧೀಶೆ ಶುಭಾ

ವೀರಾಜಪೇಟೆ : ಮನುಷ್ಯ ತನ್ನ ಸಂಸ್ಕೃತಿಯನ್ನು ಎಂದಿಗೂ ಬಿಡಬಾರದು. ಸಂಸ್ಕೃತಿಯನ್ನು ಮರೆಯುವುದು ದೇಶದ ವಿನಾಶಕ್ಕೆ ನಾಂದಿ ಹಾಡಿದಂತೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮಡಿಕೇರಿ ಡಿ.ಎಲ್.ಎಸ್.ಎ ಸದಸ್ಯ ಕಾರ್ಯದರ್ಶಿ ಶುಭಾ ಅಭಿಪ್ರಾಯಪಟ್ಟರು. ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ, ವಿರಾಜಪೇಟೆ ಹಾಗೂ ಕಾವೇರಿ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ಮಾನವೀಯ ಮೌಲ್ಯಗಳು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದಕ್ಕೆ ಮುಖ್ಯ ಕಾರಣ ಮಾದಕ ವಸ್ತುಗಳ ಬಳಕೆ ಹಾಗೂ ಮೊಬೈಲ್ […]

ಬಾಳುಗೋಡು ಸಹಿಪ್ರಾ ಶಾಲೆ ವಿದ್ಯಾರ್ಥಿಗಳಿಗೆ CISCO & ʼಜಾಗೃತಿʼ ಸಂಸ್ಥೆಯಿಂದ ಉಡುಗೊರೆ..!

ಕುಶಾಲನಗರ : ಬಾಳುಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ CISCO ಹಾಗೂ ʼಜಾಗೃತಿʼ ಸರ್ಕಾರೇತರ ಸಂಸ್ಥೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು. ಸಂಸ್ಥೆ ಪ್ರತಿನಿಧಿಗಳಾದ ನೋಯಲ್ ಹಾಗೂ ಕಣ್ಣನ್ ನೇತೃತ್ವದಲ್ಲಿ ಮಕ್ಕಳ ದಿನಾಚರಣೆಯ ಉಡುಗೊರೆಯಾಗಿ ಎಕ್ಸಾಂ ಪ್ಯಾಡ್(exam pad) ಮತ್ತು ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಕಿಟ್‌(sanitary kit) ವಿತರಿಸಲಾಯಿತು. ಜಾಗೃತಿ ಹಾಗೂ CISCO ಸಂಸ್ಥೆಯ ಸಿಬ್ಬಂದಿ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಸ್ಥಳೀಯ ಉದ್ಯಮಿ ದಿನೇಶ್ ಹಾಗೂ ಹಳೆ ವಿದ್ಯಾರ್ಥಿ ಬಳಗದ ರವಿಕುಮಾರ್ ಬಿ.ಎನ್. […]

ಶಾಸಕ ಎ.ಎಸ್.‌ ಪೊನ್ನಣ್ಣ ವಿರುದ್ಧ ಅವಹೇಳನಕಾರಿ ಕಾಮೆಂಟ್‌ – ಗೋಣಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು..!

ಗೋಣಿಕೊಪ್ಪ : ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.‌ ಪೊನ್ನಣ್ಣ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಕಾಮೆಂಟ್‌ ಹಾಕಿದ ಪ್ರಕರಣ ಸಂಬಂಧ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಾಗುತ್ತಿದೆ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಜಮ್ಮಡ ಸೋಮಣ್ಣ ನೇತೃತ್ವದಲ್ಲಿ ಗೋಣಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕೆಟ್ಟದಾಗಿ ಕಾಮೆಂಟ್‌ ಹಾಕಿರುವ 05 ಮಂದಿಯ ವಿರುದ್ಧ ದೂರು ನೀಡಿ ಕ್ರಮಕ್ಕೆ ಆಗ್ರಹಿಸಲಾಗಿದೆ. ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಂಡ ದ್ಯಾನ್ ದೇವಯ್ಯ, ಗೋಣಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ […]

ಕಾರಿನಲ್ಲಿತ್ತು ಮಹಿಳೆ ಶ*ವ – ಮಧ್ಯರಾತ್ರಿ ಚೆಕ್‌ಪೋಸ್ಟ್‌ನಲ್ಲಿ ಸಿಕ್ಕಿಬಿದ್ದ ಮೂವರು..!

ಸಿದ್ದಾಪುರ : ಕಾರಿನಲ್ಲಿ ಮಹಿಳೆಯ ಶ*ವ ಸಾಗಿಸುತ್ತಿದ್ದ ಪ್ರಕರಣ ಮಾಲ್ದಾರೆ ಚೆಕ್‌ಪೋಸ್ಟ್‌ನಲ್ಲಿ ಬೆಳಕಿಗೆ ಬಂದಿದೆ. ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್ ಮೂಲಕ ನಿನ್ನೆ ನಡುರಾತ್ರಿ ಕಾರೊಂದರಲ್ಲಿ ಮಹಿಳೆಯೊಬ್ಬರ ಮೃ*ತದೇಹವನ್ನು ಸಾಗಿಸಲು ಪ್ರಯತ್ನ ನಡೆದಿತ್ತು. ಈ ವೇಳೆ ಅಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ತಪಾಸಣೆ ನಡೆಸುವ ವೇಳೆ ಶ*ವ ಇರುವುದು ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ಕಾರಿನಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಶಕ್ಕೆ ಪಡೆದವರ ವಿಚಾರಣೆ ನಡೆಸುತ್ತಿದ್ದಾರೆ. ಮೈಸೂರಿನಿಂದ […]