ಕನ್ನಡ ಭಾಷೆಯ ಶ್ರೇಷ್ಠತೆ, ಪ್ರತಿಷ್ಠೆಯನ್ನು ಪ್ರತಿಯೊಬ್ಬ ಕನ್ನಡಿಗ ಅರಿತು ಬಾಳಬೇಕು – ಡಾ. ಹೇಮಂತ್ ಕುಮಾರ್

ವೀರಾಜಪೇಟೆ : ಪರಭಾಷೆಗಳ ವ್ಯಾಮೋಹದಿಂದ ಕನ್ನಡ ಭಾಷೆ ಶೋಚನೀಯ ಸ್ಥಿತಿಯನ್ನು ತಲುಪುತ್ತಿದೆ. ಕನ್ನಡಿಗರಿಗೆ ಭಾಷೆಯ ಶ್ರೇಷ್ಠತೆ, ಅನನ್ಯತೆ ಅರಿವಿಲ್ಲದಿರುವುದರಿಂದ ಈ ಪರಿಸ್ಥಿತಿ ಎದುರಾಗಿದೆ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಹೇಮಂತ್ ಕುಮಾರ್ ಅಭಿಪ್ರಾಯಪಟ್ಟರು. ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ನಾಡು ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ಅದನ್ನು ಏಕೀಕರಣಗೊಳಿಸಿದ ನೆನಪಿಗಾಗಿ ಹಾಗೂ ಮೈಸೂರು ರಾಜ್ಯವೆಂದಿದ್ದ ಹೆಸರನ್ನು ಕರ್ನಾಟಕವೆಂದು ಮರು […]
ಕೊಡಗಿನ ಪುತ್ತರಿ ಹಬ್ಬ ಡಿಸೆಂಬರ್ 04ಕ್ಕೆ – ಇಲ್ಲಿದೆ ನೋಡಿ ಸಮಯ ಪಟ್ಟಿ..!

ನಾಪೋಕ್ಲು : ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿ.04ಕ್ಕೆ ನಿಗದಿಯಾಗಿದೆ. ಮಳೆ ದೇವರು ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ ಕಾರ್ಯ ಇಂದು ನಡೆಯಿತು. ಸಾರ್ವತ್ರಿಕವಾಗಿ ಡಿಸೆಂಬರ್ 04 ರಂದು ರೋಹಿಣಿ ನಕ್ಷತ್ರದಲ್ಲಿ ಹಬ್ಬಾಚರಣೆ ನಡೆಯಲಿದೆ. ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು. ಭೋಜನಕ್ಕೆ 10.10 ಗಂಟೆಗೆ ಮುಹೂರ್ತ ನಿಗದಿಯಾಗಿದೆ. ಸಾರ್ವತ್ರಿಕವಾಗಿ ರಾತ್ರಿ 8.40 ಗಂಟೆಗೆ […]
ಕೊಡಗಿನಲ್ಲಿ ಒಂದು ವರ್ಷದಲ್ಲಿ ಬೀದಿ ಶ್ವಾನ ದಾಳಿಗೆ ಒಳಗಾದವರ ಸಂಖ್ಯೆ ಎಷ್ಟು ಗೊತ್ತಾ..!?

ಮಡಿಕೇರಿ : ದಿನದಿಂದ ದಿನಕ್ಕೆ ಬೀದಿ ಶ್ವಾನಗಳ ಹಾವಳಿ ಹೆಚ್ಚಾಗುತ್ತಿದ್ದು, ಶ್ವಾನ ಕಡಿತಕ್ಕೆ ಒಳಗಾಗುವವರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬೀದಿ ಶ್ವಾನ ಹಾವಳಿ ನಿಯಂತ್ರಣ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಮಾತನಾಡಿದರು. ಬೀದಿ ಶ್ವಾನಗಳನ್ನು ಸ್ಥಳಾಂತರಿಸಲು ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ) […]