KMSA ಲಾಂಛನ ಅನಾವರಣಗೊಳಿಸಿದ ಪೊನ್ನಣ್ಣ

KMSA

ಪೊನ್ನಂಪೇಟೆ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ)ಯ ಅಧಿಕೃತ ಲಾಂಛನವನ್ನು ಗುರುವಾರದಂದು ಅನಾವರಣಗೊಳಿಸಲಾಯಿತು. ಸಂಸ್ಥೆಗಾಗಿ ವಿನ್ಯಾಸಗೊಳಿಸಲಾಗಿದ್ದ ನೂತನ ಲಾಂಛನವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಆಗಿರುವ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಬೆಂಗಳೂರಿನ ವಿಧಾನಸೌಧದ 2ನೇ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ ವಿದ್ಯುಕ್ತವಾಗಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೊನ್ನಣ್ಣ ಅವರು, ಕ್ರೀಡೆಗಳು ಜನರ ನಡುವೆ ಸೌಹಾರ್ದತೆಯನ್ನು ಬೆಳೆಸುತ್ತವೆ. ವಿವಿಧ ಹಿನ್ನೆಲೆಯ ಜನರು ಒಟ್ಟಾಗಿ ಆಡಲು ಮತ್ತು ಒಟ್ಟಿಗೆ ಕೆಲಸ ಮಾಡಲು ಅವಕಾಶ ನೀಡುತ್ತವೆ. ಮುಖ್ಯವಾಗಿ […]

ಸಿನೆಮಾ ರಂಗದ ಹಿರಿಯ ನಟ ದೊಡ್ಡಣ್ಣ ಅವರ ಅರೋಗ್ಯ ವಿಚಾರಿಸಿದ ಶಾಸಕ ಪೊನ್ನಣ್ಣ

ಸಿನಿರಂಗದ ಹಿರಿಯ ಕಲಾವಿದರಾದ ದೊಡ್ಡಣ್ಣರವರನ್ನು ಬೆಂಗಳೂರಿನಲ್ಲಿ ವಿರಾಜಪೇಟೆ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ಮಾಡಿ ಅವರ ಅರೋಗ್ಯ-ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಸಿನಿರಂಗದ ಇತರ ಹಿರಿಯ ಕಲಾವಿದರು ಉಪಸ್ಥಿತರಿದ್ದರು.

ಮೀನು ಕೃಷಿಕರಿಗೆ ಉಚಿತ ಮೀನು ಮರಿ ನೀಡಲು ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮಡಿಕೇರಿ ತಾಲ್ಲೂಕಿನ ಕೃಷಿಕರಿಗೆ ಮೀನು ಕೃಷಿ ಕೊಳ, ಬಾವಿ ಮತ್ತು ಕೃಷಿ ಹೊಂಡಗಳಲ್ಲಿ ಮೀನು ಸಾಕಾಣೆಕೆ ಮಾಡಲು ಉಚಿತವಾಗಿ 500 ಸಾಮಾನ್ಯ ಗೆಂಡೆ ಮೀನು ಮರಿಗಳನ್ನು ಮತ್ತು ಗರಿಷ್ಠ 250 ಗಿಫ್ಟ್ ತಿಲಾಪಿಯ ಮೀನು ಮರಿಗಳನ್ನು ವಿತ್ತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ, ಆರ್‍ಟಿಸಿ, ಆಧಾರ್ ಕಾರ್ಡ್ ದಾಖಲಾತಿಗಳನ್ನು ನವೆಂಬರ್, 27 ರ ಸಂಜೆ 5.30 ಗಂಟೆಯೊಳಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ ಐ.ಟಿ.ಐ ಜಂಕ್ಷನ್, ಕಾಲೇಜು ರಸ್ತೆ, ಮಡಿಕೇರಿ ಕಚೇರಿಗೆ ಸಲ್ಲಿಸಬಹುದು ಎಂದು […]

ಮಡಿಕೇರಿ: ವಿಶ್ವ ಪರಂಪರಾ ಸಪ್ತಾಹಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ

ಮಡಿಕೇರಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಾಗೂ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ನವೆಂಬರ್, 25 ರವರೆಗೆ ನಡೆಯುವ ವಿಶ್ವ ಪಾರಂಪರ ಸಪ್ತಾಹ ಹಾಗೂ ಶಾಶ್ವತ ಛಾಯಾಚಿತ್ರ ಪ್ರದರ್ಶನ, ಗ್ಯಾಲರಿ ಸಹಿತ ವ್ಯಾಖ್ಯಾನ ಕೇಂದ್ರವನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದ್ದು, 1600 ವರ್ಷಗಳ ಹಿಂದೆಯೇ ಕೊಡಗನ್ನು ಹಲವರು ಆಡಳಿತ ಮಾಡಿದ್ದು, […]