ಮೀನು ಮಾರಾಟ ʼದ್ವಿಚಕ್ರ ವಾಹನʼ ಖರೀದಿಗೆ ಅರ್ಜಿ ಆಹ್ವಾನ

ಮಡಿಕೇರಿ : ಪೊನ್ನಂಪೇಟೆ ತಾಲ್ಲೂಕು ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ‘ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದ ಸದರಿ ವ್ಯಾಪ್ತಿಗೊಂಡಿರುವ ಪರಿಶಿಷ್ಟ ಪಂಗಡ ಗಿರಿಜನ ಉಪ ಯೋಜನೆಯಡಿ ಆಯ್ದ ಮೀನು ಮಾರಾಟಗಾರರಿಗೆ/ ಮೀನುಗಾರಿಕೆ ವೃತ್ತಿ ಅವಲಂಬಿಸಿರುವವರಿಗೆ ದ್ವಿಚಕ್ರ ಮೀನು ಮಾರಾಟ ವಾಹನ ಖರೀದಿಗೆ ಶೇ.90 ಆರ್ಥಿಕ ನೆರವು ನೀಡಲು ಒಂದು ಭೌತಿಕ ಗುರಿ ನಿಗದಿಪಡಿಸಿದ್ದು, ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಮತ್ತು […]
ನ.24 ರಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಸಂಪ್ರೋಕ್ಷಣೆ

ಭಾಗಮಂಡಲ : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಸಂಪ್ರೋಕ್ಷಣೆಯನ್ನು ನಡೆಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನವೆಂಬರ್ 24 ರಿಂದ 27 ರವರೆಗೆ “ಸಂಪ್ರೋಕ್ಷಣೆ” ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ ಚಂದ್ರಶೇಖರ್ ಕೋರಿದ್ದಾರೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ನವೆಂಬರ್ 24 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, […]
ನ.22 ರಂದು ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ’!

ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವವು ನವೆಂಬರ್ 22 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಕರ್ನಾಟಕ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮೈಸೂರು ವಿಭಾಗ ಕರ್ನಾಟಕ ರಾಜ್ಯ […]
ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ – ರಸ್ತೆ ಅವ್ಯವಸ್ಥೆ ಬಗ್ಗೆ ಬಿಸಿ ಬಿಸಿ ಚರ್ಚೆ..! – ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಹೇಳಿದ್ದೇನು..?

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ನೀರಾವರಿ ಇಲಾಖೆ ವ್ಯಾಪ್ತಿಯ ರಸ್ತೆಗಳು ಹದಗೆಟ್ಟಿದ್ದು, ಈಗಾಗಲೇ ಮಳೆಗಾಲ ಮುಗಿದಿರುವುದರಿಂದ ಶೀಘ್ರ ರಸ್ತೆ ಕಾಮಗಾರಿ ಕೈಗೊಂಡು ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]
ಗ್ರಂಥಾಲಯ ಸಪ್ತಾಹ ಸಮಾರೋಪ – ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

ಮಡಿಕೇರಿ : ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಸಾಧನೆ ಮಾಡಬೇಕಾದರೆ ಒಳ್ಳೆಯ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಹೇಳಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ವತಿಯಿಂದ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-೨೦೨೫ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಸಾಹಿತಿ ಕೆ.ಪಿ.ಬಾಲಸುಬ್ರಹ್ಮಣ್ಯ ಕಂಜರ್ಪಣೆ ಮಾತನಾಡಿ, ಪ್ರತಿ ವರ್ಷ ನವೆಂಬರ್ ೧೪ ರಿಂದ ಒಂದು ವಾರ ಕಾಲ ರಾಷ್ಟ್ರೀಯ […]
ಮಡಿಕೇರಿ : ಪ್ರಕೃತಿ ಚಿಕಿತ್ಸಾ ಜಾಗೃತಿ ಶಿಬಿರದ ಸಮಾರೋಪ

ಮಡಿಕೇರಿ : 08ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ನವೆಂಬರ್ ೧೦ ರಿಂದ ನವಂಬರ್ ೧೮ರವರೆಗೆ ಕೊಡಗು ಜಿಲ್ಲೆಯಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಜಾಗೃತಿ ಶಿಬಿರದ ಸಮಾರೋಪ ಸಮಾರಂಭ ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ನಡೆಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೇಂದ್ರ ಆಯುಷ್ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ಹಾಗೂ ಭಾರತೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದವೀಧರರ ಸಂಘ ಇವರ ಸಹಯೋಗದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ […]
ನವೆಂಬರ್ 26ರಂದು ಸಂವಿಧಾನ ದಿನಾಚರಣೆ : ಅಗತ್ಯ ಸಿದ್ಧತೆಗೆ ಎಡಿಸಿ ಆರ್. ಐಶ್ವರ್ಯ ಸೂಚನೆ

ಮಡಿಕೇರಿ : ನವೆಂಬರ್ 26 ರಂದು ಸಂವಿಧಾನ ದಿನಾಚರಣೆಯನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಅವರು, ಸರ್ಕಾರ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚಿಸಿದೆ. ಆ ದಿಸೆಯಲ್ಲಿ ಜಾಥಾ ಹಾಗೂ ಸಭಾ ಕಾರ್ಯಕ್ರಮ ಏರ್ಪಡಿಸಿ ಸಂವಿಧಾನದ ಮಹತ್ವ ಕುರಿತು ಉಪನ್ಯಾಸ ನೀಡುವಂತಾಗಬೇಕು. ಕಾರ್ಯಕ್ರಮ ಆಯೋಜನೆ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸರ್ಕಾರೇತರ ಸಂಸ್ಥೆಗಳು ಹಾಗೂ ವಿವಿಧ ಸಮಾಜದ ಮುಖಂಡರನ್ನು […]
ಅಖಿಲ ಭಾರತ 72ನೇ ಸಹಕಾರ ಸಪ್ತಾಹ ಸಮಾರೋಪ – ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ

ಮಡಿಕೇರಿ : ಸಹಕಾರ ಸಂಘಗಳ ಬೆಳವಣಿಗೆ ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಸಹಕಾರ ಸಂಘಗಳ ಕೊಡುಗೆ ಅಪಾರ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ‘ಉನ್ನತಿ’ […]
ಸೈಂಟ್ ಅನ್ಸ್ ಪದವಿ ಕಾಲೇಜಿನಲ್ಲಿ ಕನ್ನಡ ನುಡಿ ಗೀತಗಾಯನ ಸ್ಪರ್ಧೆ

ವಿರಾಜಪೇಟೆ: ಭೌವ್ಯ ಪರಂಪರೆಯ, ವಿವಿಧತೆಯಲ್ಲಿ ಏಕತೆ ಕಂಡ ಜಾನಪದ ಸೊಗಡು ಕಂಡ ಭಾಷೆ ಕನ್ನಡ. ಇತರ ಭಾಷೆಗಳನ್ನು ಗೌರವಿಸಿ ತಾಯಿ ಕನ್ನಡ ಭಾಷೆಯನ್ನು ಧೀಮಂತಗೊಳಿಸುವ ಪ್ರಯತ್ನ ನಿರಂತರವಾಗಿ ಸಾಗಬೇಕು ಎಂದು ಕೊಡಗು ವಿಶ್ವವಿದ್ಯಾಲಯ ಕುಲಪತಿಗಳಾದ ಡಾ. ಅಶೋಕ ಸಂಗಪ್ಪ ಆಲೂರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸೈಂಟ್ ಆನ್ಸ್ ಪದವಿ ಕಾಲೇಜು ಕನ್ನಡ ಭಾಷಾ ವಿಭಾಗ, ಕೊಡಗು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತು, ಮತ್ತು ವಿರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ಕನ್ನಡ ರಾಜ್ಯೋತ್ಸವ […]