ಮೂರ್ನಾಡು : ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಉಚಿತ ಶಿಬಿರ – 200ಕ್ಕೂ ಅಧಿಕ ಮಂದಿಯ ತಪಾಸಣೆ

ಮೂರ್ನಾಡು : ಕಾಂತೂರು-ಮೂರ್ನಾಡು ಹಾಗೂ ಹೊದ್ದೂರು ಪಂಚಾಯಿತಿ, ಕಂದಾಯ ಇಲಾಖೆ ನೇತೃತ್ವದಲ್ಲಿ ಮೈಸೂರಿನ ಬೃಂದಾವನ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಮೂರ್ನಾಡುವಿನ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶಿಬಿರದಲ್ಲಿ 200ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ಸಾರ್ವಜನಿಕರಿಗೆ ರಕ್ತದೊತ್ತಡ, ಮಧುಮೇಹ, ನೇತ್ರ, ಮೂಳೆ&ಕೀಲು, ನರರೋಗ, ಕಿವಿ-ಮೂಗು, ಗಂಟಲು, ಸ್ತ್ರೀರೋಗ ಮುಂತಾದ ತಪಾಸಣೆಯನ್ನು ಉಚಿತವಾಗಿ ನಡೆಸಲಾಯಿತು. ಶಾಲೆ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನೂ ಈ ಸಂದರ್ಭ ಮಾಡಲಾಯಿತು. ಬೃಂದಾವನ ಆಸ್ಪತ್ರೆಯ ನಿರ್ದೇಶಕ […]

ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಮಡಿಕೇರಿ:- ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ನಗರದ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಗುರುವಾರ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ.ದಿನೇಶ್ ಕುಮಾರ್ ಇತರರು ಇದ್ದರು. ನವೆಂಬರ್, 29 ರಂದು ಸಂಜೆ 4 ಗಂಟೆಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಡಾ.ಎಂ.ಬಿ.ಬೋರಲಿಂಗಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ ಕಾಲೇಜಿಗೆ ಕೀರ್ತಿ […]

ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ

ಕುಶಾಲನಗರ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ವಿಷನ್ ಕರ್ನಾಟಕ ಫೌಂಡೇಶನ್, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಹಾಗೂ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ Raising and Accelerating MSME Performance ಅಡಿ Incubation ಯೋಜನೆ ಕುರಿತು ಬುಧವಾರ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಡಿಎಫ್‌ಒ ಎಂಎಸ್‌ಎಂಇ ನಿವೃತ್ತ ಉಪ […]

ಜೋಪಡಿಯಲ್ಲಿದ್ದ ವೃದ್ಧೆ ಬಾಳಿಗೆ ಬೆಳಕಾದ ವಿದ್ಯಾರ್ಥಿನಿ ಶ್ರೀಶಾ

ಹರದೂರು ಗ್ರಾಮ ಪಂಚಾಯಿತಿಯ ಮುತ್ತಿನ ತೋಟದ ಬಳಿ ಜೋಪಡಿಯಲ್ಲಿದ್ದ ಗಿರಿಜಾ (76) ಅವರಿಗೆ ಸುಸಜ್ಜಿತ ಸೂರು ಒದಗಿಸಿ ಎಳೆಯ ಪ್ರಾಯದಲ್ಲೇ ಮಾನವೀಯತೆ ತೋರಿದ್ದಾರೆ ವಿದ್ಯಾರ್ಥಿನಿ ಶ್ರೀಶಾ.  ಗುಡಿಸಲಿನಲ್ಲಿ ಸಂಕಷ್ಟದ ಜೀವನ ಸಾಗಿಸುತ್ತಿದ್ದ ವೃದ್ಧ ದಂಪತಿಯ ಸ್ಥಿತಿಯ ಬಗ್ಗೆ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಶ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರು ಹಾಗೂ ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.  ಇದಕ್ಕೆ ಸ್ಪಂದಿಸಿದ ಸ್ಥಳೀಯ ಪಂಚಾಯಿತಿ ಸದಸ್ಯ ಸಲೀಂ ಮನೆ ನಿರ್ಮಿಸಿ ಕೊಡುವ ಭರವಸೆ […]

KMSA: ನಾಲ್ವರು ನಿರ್ದೇಶಕರ ನೇಮಕ

ಪೊನ್ನಂಪೇಟೆ: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ)ಯ ಆಡಳಿತ ಮಂಡಳಿಗೆ ನೂತನವಾಗಿ ನಾಲ್ವರು ನಿರ್ದೇಶಕರನ್ನು ನೇಮಿಸಲಾಗಿದೆ. ಕಂಡಂಗಾಲದ ಮಂದಮಾಡ ರಫೀಕ್ (ಮುನ್ನ), ಬೇಗೂರಿನ ಆಲೀರ ಬಿ. ಮೂಸ, ಎಡಪಾಲದ ಕುಪ್ಪೋಡಂಡ ಮಹಮ್ಮದ್ ಮತ್ತು ಚೆರಿಯಪರಂಬುವಿನ ಪರವಂಡ ಸಿರಾಜ್ ಎಂಬುವವರೇ ನೂತನವಾಗಿ ನೇಮಕಗೊಂಡ ನಿರ್ದೇಶಕರಾಗಿದ್ದಾರೆ. ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್ ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನೇಮಕ ಪ್ರಕ್ರಿಯೆ ನಡೆಯಿತು. ಈ ಕುರಿತು ಹೇಳಿಕೆ ನೀಡಿರುವ ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್, ಕೊಡವ […]