ಯುವ ಸಮೂಹದಲ್ಲಿ ಕ್ಷೀಣಿಸುತ್ತಿರುವ ಪತ್ರಿಕೆ, ಪುಸ್ತಕ ಓದು – ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ – ಜಗದೀಶ್‌ ಜೋಡುಬೀಟಿ ಕಳವಳ

ಗೋಣಿಕೊಪ್ಪ : ಪತ್ರಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ಹೇಳಿದರು. ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ, ಗೋಣಿಕೊಪ್ಪ ಕಾವೇರಿ ಕಾಲೇಜು ಎನ್‌ಎಸ್‌ಎಸ್‌ ಘಟಕ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ವಾರ್ಷಿಕ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪತ್ರಿಕಾ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಯುವಜನತೆ ಎಂಬ ವಿಷಯದ ಬಗ್ಗೆ ಮಾತನಾಡಿದರು. ಪತ್ರಿಕೆಗಳು ವಿಶ್ವಾಸಾರ್ಹ ಮಾಹಿತಿಯ ಮೂಲವಾಗಿದೆ. ಯುವ ಜನರಿಗೆ ವಿಭಿನ್ನ ವಿಷಯಗಳ ಬಗ್ಗೆ ತಿಳುವಳಿಕೆಯನ್ನು ನೀಡುತ್ತವೆ. ಪತ್ರಿಕೆಗಳನ್ನ […]

ಒಂದು ಬಾರಿ ರಕ್ತದಾನ – ಬೆಳಗಲಿಗೆ ಮೂವರ ಜೀವನ – ಮಾಧ್ಯಮ ಸ್ಪಂದನ ನೇತೃತ್ವದಲ್ಲಿ ಯಶಸ್ವಿ ರಕ್ತದಾನ ಶಿಬಿರ

ಗೋಣಿಕೊಪ್ಪ : ಒಬ್ಬರ ರಕ್ತದಿಂದ ಮೂವರ ಜೀವ ಉಳಿಸಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುಂಬಯ್ಯ ಮನವಿ ಮಾಡಿಕೊಂಡರು. ಮಾಧ್ಯಮ ಸ್ಪಂದನ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ, ಗೋಣಿಕೊಪ್ಪ ರೋಟರಿ ಸಹಯೋಗದಲ್ಲಿ ಉಮಾಮಹೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಒಬ್ಬರು ನೀಡುವ ರಕ್ತದಿಂದ […]

ನಮ್ಮಿಬ್ಬರ ನಡುವೆ ಯಾವುದೇ ಗೊಂದಲ ಭಿನ್ನಾಭಿಪ್ರಾಯವಿಲ್ಲ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿದ್ದ ಸಮರಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಹೈಕಮಾಂಡ್‌ ಸೂಚನೆ ಮೇರೆಗೆ ಇಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಉಪಹಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಗೊಂದಲ ತಾತ್ಕಾಲಿಕವಾಗಿ ಬಗೆಹರಿದಿರುವ ಬಗ್ಗೆ ಸ್ಪಷ್ಟಪಡಿಸಿದರು. ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದೆಯೂ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಮುಂದೆಯೂ ಇಲ್ಲ. ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ ಎಂದರು. 2023ರ ಚುನಾವಣೆಯಲ್ಲಿ ನಾವಿಬ್ಬರು ಹೇಗೆ ಜೊತೆಗೆ ಹೋಗಿದ್ದೆವೋ ಅದೇ ರೀತಿ 2028ರ […]