ಅರೆಭಾಷೆ ಗೌಡ ಸಮುದಾಯಕ್ಕೆ ಮಡಿಕೇರಿಯಲ್ಲಿ ಜಮೀನು – ಮುಂದಿನ ಬಜೆಟ್‌ನಲ್ಲಿ ಈಡೇರಿಕೆ – ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ ಉದ್ಘಾಟಿಸಿ ಮಾತನಾಡಿದರು. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು […]