ಕೊಡವ ಮುಸ್ಲಿಮರಿಂದ ಕಾಟ್ರಕೊಲ್ಲಿ ಪುತ್ತರಿ ಆಚರಣೆ

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಪುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಗುರುವಾರ ರಾತ್ರಿ ನೂರಾರು ಕೊಡವ ಮುಸ್ಲಿಂ ಸಮುದಾಯದವರು ದ. ಕೊಡಗಿನ ಕಾಟ್ರಕೊಲ್ಲಿಯಲ್ಲಿ ಅಲ್ಲಿನ ಆಲೀರ ಕುಟುಂಬಸ್ಥರ ಆತಿಥ್ಯದಲ್ಲಿ ಅದ್ದೂರಿಯಾಗಿ ಆಚರಿಸಿದರು. ಕಾಟ್ರಕೊಲ್ಲಿಯ ಆಲೀರ ಎಂ. ಸಾದಲಿ ಅವರ ಗದ್ದೆಯಲ್ಲಿ ಈ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಕೆಎಂಎ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಲೀರ ಕುಟುಂಬದ ಹಿರಿಯರಾದ […]