ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಸ್ಪೈಸಸ್‌ ಅಂಗಡಿಯ ಮೂವರನ್ನು ಬಂಧಿಸಿದ ಪೊಲೀಸರು

ಮಡಿಕೇರಿ : ಸ್ಪೈಸಸ್‌ ಅಂಗಡಿಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿಯ ರಾಣಿಪೇಟೆ ನಿವಾಸಿ ಫಹಾದ್ ಎಮ್‌.ಇ(31), ತ್ಯಾಗರಾಜ ಕಾಲನಿಯ ನಿವಾಸಿ ಬಾಸಿಲ್ ಎಂ.ಎಚ್.(29), ತ್ಯಾಗರಾಜ ಕಾಲೋನಿ ನಿವಾಸಿ ಸಮೀರ್ ಎಂ.ಎಂ.(31) ಬಂಧಿತರು. ಯುವಕರ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಕೀಳುಮಟ್ಟದ ಭಾಷೆ ಬಳಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಅವರ ವಿರುದ್ಧ […]

ಕುರುಳಿ ಅಂಬಲಮಂದ್‌ನಲ್ಲಿ ಸಂಭ್ರಮದಿಂದ ಜರುಗಿದ ಪುತ್ತರಿ ಕೋಲಾಟ್

ಮಡಿಕೇರಿ : ಕಡಗದಾಳುವಿನ ಕುರುಳಿ ಅಂಬಲ ಮಂದ್‌ನಲ್ಲಿ ಪುತ್ತರಿ ಕೋಲಾಟ್ ಸಾಂಪ್ರದಾಯಿಕವಾಗಿ ಮಂಗಳವಾರ ನಡೆಯಿತು. ಡಿಸೆಂಬರ್ 03ರ ಸಂಜೆ ಈಡ್, ಡಿ.7 ಭಾನುವಾರ ಮುಂಜಾನೆ ಮಂದ್ ತೊರ್‌ಪ, ಡಿ 9ರ ಮಂಗಳವಾರ ಊರಿನವರು ಮಂದ್‌ನಲ್ಲಿ ಸೇರಿ ಮಧ್ಯಾಹ್ನ 12 ಗಂಟೆಗೆ ಊರ್ ತಕ್ಕರ‌ ಮನೆಗೆ ತೆರಳಿ ಫಲಹಾರ ಊಟೋಪಚಾರದ ನಂತರ ತಳಿಯಕ್ಕಿ ಬೊಳ್‌ಚ, ದುಡಿಕೊಟ್ಟ್ ಪಾಟ್, ಒಡ್ಡೋಲಗದೊಂದಿಗೆ ಊರ್ ತಕ್ಕರನ್ನು ಮಂದ್‌ಗೆ ಕರೆ ತಂದರು. ನಂತರ ಊರ್ ಕೋಲ್ ನಡೆಯಿತು. 3 ಗಂಟೆಗೆ ದೇಶ ತಕ್ಕರನ್ನು ಹಾಗು […]

ಡಿ.11ರಂದು ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಲೋಕಾರ್ಪಣೆ

ಪೊನ್ನಂಪೇಟೆ: ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಮಾತ್ರ ಸೀಮಿತಪಟ್ಟು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ಇದೇ ತಿಂಗಳ 11ರಂದು ಗುರುವಾರ ಉದ್ಘಾಟನೆಗೊಳ್ಳಲಿದೆ. ಮಡಿಕೇರಿ ತಾಲೂಕಿನ ಕಕ್ಕಬ್ಬೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲೆಯೊಂದಕ್ಕೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸುವ ಮೂಲಕ ಕೆ.ಎಂ.ಎಸ್.ಎ.ಯನ್ನು ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಅಕಾಡೆಮಿ ಅಧ್ಯಕ್ಷರಾದ ಆಲೀರ ರಶೀದ್ ತಿಳಿಸಿದ್ದಾರೆ. ಈ ಕುರಿತು ವಿರಾಜಪೇಟೆಯಲ್ಲಿ ನಡೆದ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸಭೆಯ […]

ಡಿ. 21ರಿಂದ ವಿ.ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ

ಪೊನ್ನಂಪೇಟೆ: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ವಿಯೋಮನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅವರ ಸಹ ಪ್ರಾಯೋಜಕತ್ವದಲ್ಲಿ 4ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2025 ಅನ್ನು ಇದೇ ಡಿ.21ರಿಂದ 25ರವರೆಗೆ ಆಯೋಜಿಸಲಾಗಿದೆ. ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ ಈ ಹಾಕಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ವಿ. ಬಾಡಗ ಹೈಪ್ಲೈಯರ್ಸ್ ತಂಡದ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ […]