ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಲೋಕಾರ್ಪಣೆ

ಪೊನ್ನಂಪೇಟೆ: ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಆದರೆ ಅವರಿಗೆ ಪೂರಕ ವ್ಯವಸ್ಥೆ ಇಲ್ಲದಿರುವ ಕಾರಣ ಯಶಸ್ಸು ಸಾಧಿಸಲಾಗುತ್ತಿಲ್ಲ. ಆದ್ದರಿಂದ ಅರ್ಹ ಕ್ರೀಡಾ ಪ್ರತಿಭಗಳಿಗೆ ಸರಕಾರೇತರ ಸಂಘ ಸಂಸ್ಥೆಗಳ ಪ್ರೋತ್ಸಾಹ ತೀರಾ ಅಗತ್ಯ ಎಂದು ಕೊಡಗು ಜಿಲ್ಲಾ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಹೇಳಿದರು. ಕಕ್ಕಬ್ಬೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಮಕ್ಕಳಿಗೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸುವುದರ ಮೂಲಕ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ […]
ಪ್ರಧಾನಿ ಮೋದಿ ಬಗ್ಗೆ ಯುವಕರಿಂದ ಅವಹೇಳನ – ಬಿಜೆಪಿಗರು ಬಹಿರಂಗವಾಗಿ ಕ್ಷಮೆ ಯಾಚಿಸಲಿ – ತೆನ್ನೀರ ಮೈನಾ ಆಗ್ರಹ

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನ ಮಾಡಿ ಬಂಧಿತರಾಗಿರುವ ಕಿಡಿಗೇಡಿಗಳು ಮಡಿಕೇರಿ ನಗರ ಬಿಜೆಪಿ ಮುಖಂಡರ ಚೇಲಾಗಳು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಗಂಭೀರ ಆರೋಪ ಮಾಡಿದ್ದಾರೆ. ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಅನಧಿಕೃತ ಮಳಿಗೆಗಳನ್ನು ಮಡಿಕೇರಿ ಬಿಜೆಪಿ ಮುಖಂಡರ ಬಹಿರಂಗ ಕುಮ್ಮಕ್ಕಿನಿಂದ ನಡೆಸುತ್ತಿರುವ ವ್ಯಕ್ತಿಯ ಸಿಬ್ಬಂದಿ ಅತ್ಯಂತ ಕೀಳಾಗಿ ನಿಂದಿಸಿ ವಿಡಿಯೋ ಹರಿಯಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಪೋಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ಷಿಪ್ರಗತಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. […]
ಪತ್ನಿಯನ್ನು ಹ*ತ್ಯೆಗೈದ ಪತಿಗೆ ಕಠಿಣ ಜೀವಾವಧಿ ಶಿಕ್ಷೆ – ವೀರಾಜಪೇಟೆ ನ್ಯಾಯಾಲಯ ತೀರ್ಪು

ವೀರಾಜಪೇಟೆ : ಪತ್ನಿಯ ಕೊ*ಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ವೀರಾಜಪೇಟೆ ತಾಲೂಕಿನ ಕಾಕೋಟುಪರಂಬುವಿನ ಚೋಮಚ್ಚರ ಪಿ. ಲವ(30) ಶಿಕ್ಷೆಗೊಳಗಾದ ವ್ಯಕ್ತಿ. ಈತ 2022 ಏಪ್ರಿಲ್ 28ರಂದು ತನ್ನ ಪತ್ನಿ ಸುಮಿತ್ರಳನ್ನು ಹ*ತ್ಯೆಗೈದಿದ್ದ. ಪತ್ನಿ ತನಗೆ ಹೇಳದೆ ಮನೆಯಿಂದ ಹೋಗುತ್ತಾಳೆ ಎಂಬ ವಿಚಾರವಾಗಿ ಗಲಾಟೆ ಶುರುವಾಗಿ, ನಂತರ ಕಬ್ಬಿಣದ ಪೈಪ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ. ಪರಿಣಾಮ ಆಕೆ ಮೃತಪಟ್ಟಿದ್ದರು. ಈ ಸಂಬಂದ ವೀರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ 2ನೇ […]
ಶ್ರೀ ರಾಮಾಂಜನೇಯ ಭಜನಾ ಮಂಡಳಿಯ 35ನೇ ವಾರ್ಷಿಕೋತ್ಸವ ಪ್ರಯುಕ್ತ ಅಖಂಡ ಏಕಾಹ ಭಜನೆ ಡಿ.14ಕ್ಕೆ

ಮಡಿಕೇರಿ : ಶ್ರೀ ರಾಮಾಂಜನೇಯ ಭಜನಾ ಮಂಡಳಿಯ 35ನೇ ವಾರ್ಷಿಕೋತ್ಸವ ಪ್ರಯುಕ್ತ ಅಖಂಡ ಏಕಾಹ ಭಜನೆ ಕಾರ್ಯಕ್ರಮ ಡಿಸೆಂಬರ್ 14(ಭಾನುವಾರ) ಮಡಿಕೇರಿಯಲ್ಲಿ ನಡೆಯಲಿದೆ. ಶ್ರೀ ಆಂಜನೇಯ ದೇವಾಲಯದಲ್ಲಿ ಅಂದು ಬೆಳಗ್ಗೆ 6.10ರಿಂದ ಭಜನೆ ಆರಂಭವಾಗಲಿದ್ದು, ಮಡಿಕೇರಿ ನಗರಸಭೆ ಅಧ್ಯಕ್ಷೆ ಕೆ.ಪಿ. ಕಲಾವತಿ ಭದ್ರದೀಪ ಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಜಿಲ್ಲೆಯ ವಿವಿಧೆಡೆಯ 15 ತಂಡಗಳಿಂದ ನಿರಂತರ ಭಜನೆ ಇರಲಿದೆ. ಸಂಜೆ ವಿನಾಯಕ ಸೇವಾ ಟ್ರಸ್ಟ್ ಕತ್ತಲೆಕಾಡು, ಆದಿಶಕ್ತಿ ವಿನಾಯಕ ಭಜನಾ ಮಂಡಳಿ ಉಡೋತ್‌ಮೊಟ್ಟೆ, ಮದೆ […]
ಪ್ರಧಾನಿ ಮೋದಿಯ ಅವಹೇಳನ ಪ್ರಕರಣ – ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನ ಮಾಡಿದ ಯುವಕರ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಇಂದಿರಾಗಾಂಧಿ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ನಗರಸಭೆ ಅಧ್ಯಕ್ಷೆ ಕಲಾವತಿ. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.