ಮಡಿಕೇರಿ ನಗರ ಸಭೆ ಸ್ಥಾಯಿ ಸಮಿತಿ ಚುನಾವಣೆ – ಬಿಜೆಪಿಯ ನಾಲ್ವರು ಅವಿರೋಧ ಆಯ್ಕೆ

ಮಡಿಕೇರಿ : ಮಡಿಕೇರಿ ನಗರಸಭೆ ಸ್ಥಾಯಿ ಸಮಿತಿಗೆ ಬಿಜೆಪಿಯ ನಾಲ್ವರು ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ಎಸ್.ಸಿ ಸತೀಶ್, ಅರುಣ್ ಶೆಟ್ಟಿ, ಕೆ.ಎಂ ಅಪ್ಪಣ್ಣ, ಶಾರದಾ ನಾಗರಾಜ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದವರು. ನಗರಸಭೆ ಅಧ್ಯಕ್ಷೆ ಕಲಾವತಿ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ಮಾಡಲಾಯಿತು. ತೆರಿಗೆ ನಿರ್ಧಾರ ಮತ್ತು ಹಣಕಾಸು ಸಮಿತಿಗೆ ಅರುಣ್ ಶೆಟ್ಟಿ, ಸಾರ್ವಜನಿಕ ಅರೋಗ್ಯ & ಶಿಕ್ಷಣ ಸಮಿತಿಗೆ ಎಸ್.ಸಿ. ಸತೀಶ್, ಪಟ್ಟಣ ಯೋಜನೆ ನಗರ ಅಭಿವೃದ್ಧಿ ಸಮಿತಿಗೆ ಅಪ್ಪಣ್ಣ, ಲೆಕ್ಕಪತ್ರ ಸಮಿತಿಗೆ […]
ಕೊಯನಾಡು ಗ್ರಾಮದಲ್ಲಿ ಜೇನು ಪೆಟ್ಟಿಗೆ ಹಾಗೂ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸೌಲಭ್ಯ ವಿತರಿಸಿದ ಎ.ಎಸ್.ಪೊನ್ನಣ್ಣ

ತಾಲ್ಲೂಕಿನ ಕೊಯನಾಡು ವಲಯ ಅರಣ್ಯ ಕಚೇರಿ ಬಳಿ ನೂತನವಾಗಿ ನಿರ್ಮಿಸಿರುವ ಅಧಿಕಾರಿಗಳ ವಸತಿ ಗೃಹವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೋಮವಾರ ಉದ್ಘಾಟಿಸಿದರು. ಕೊಯನಾಡು ಬಳಿಯ ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಸತಿ ಗೃಹ ಉದ್ಘಾಟಿಸಿ ಶಾಸಕರು ಮಾತನಾಡಿದರು. 30 ಜನ ಕೃಷಿಕರಿಗೆ ತಲಾ 2 ಜೇನು ಪೆಟ್ಟಿಗೆ, ಹಾಗೂ 6 ಜನ ಮಹಿಳೆಯರಿಗೆ ಹೊಲಿಗೆಯಂತ್ರ ಹಸ್ತಾಂತರಿಸಿದರು. ಜೊತೆಗೆ […]