ಕೆ.ಎಂ.ಎಸ್.ಎ. ವತಿಯಿಂದ ಶಾಲೆಗೆ ಕುರ್ಚಿ ವಿತರಣೆ

ಪೊನ್ನಂಪೇಟೆ: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ವಿರಾಜಪೇಟೆ ಸಮೀಪದ ಕಂಡಂಗಾಲದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಶುಕ್ರವಾರ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್ ಅವರು ಕುರ್ಚಿಗಳನ್ನು ಶಾಲಾ ಮುಖ್ಯ ಶಿಕ್ಷಕರಾದ ಪವೀನ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆಲೀರ ರಶೀದ್, ಹಿಂದೆ ಗ್ರಾಮೀಣ ಪ್ರದೇಶದ ಜನರ ಶೈಕ್ಷಣಿಕ ಪ್ರಗತಿಯಲ್ಲಿ ಸರ್ಕಾರಿ ಶಾಲೆಗಳ ಕೊಡುಗೆ ಅಪಾರವಾಗಿದೆ. ಇಂದಿಗೂ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಹೆಚ್ಚು ಅನುಕೂಲಕರ […]