ನಿವೃತ್ತ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ರವರಿಗೆ ಬೀಳ್ಕೊಡುಗೆ ಸಮಾರಂಭ

ವಿರಾಜಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲೆಯಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ರವರನ್ನು ಕಾಲೇಜಿನ ವತಿಯಿಂದ ಬೀಳ್ಕೊಡುಗೆಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪರವರು ಮಾತನಾಡುತ್ತಾ ಪ್ರಾಂಶುಪಾಲರ ಶಿಸ್ತು ಹಾಗೂ ಕರ್ತವ್ಯ ನಿಷ್ಠೆ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿದೆ. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಂಡಿದ್ದಾರೆ ಎಂದು […]