ಕೊಡಗು ರೆಡ್‌ಕ್ರಾಸ್‌ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ

ಮಡಿಕೇರಿ : ತಾಲೂಕಿನ ಸಾಧಕ ಅಂಗನವಾಡಿ ಕಾರ್ಯಕರ್ತೆಯರಿಗೆ ರೆಡ್‌ಕ್ರಾಸ್‌ ಕೊಡಗು ಘಟಕ ವತಿಯಿಂದ ಸನ್ಮಾನ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ನಗರದ ರೆಡ್‌ಕ್ರಾಸ್‌ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ ಉದ್ಘಾಟಿಸಿದರು. ಶಿಕ್ಷಕರಿಯರೆಂದರೆ ಮಕ್ಕಳ ಪಾಲಿನ ದೇವರಂತೆ. ಮಕ್ಕಳನ್ನು ಪ್ರೀತಿಯಿಂದ ಬೆಳೆಸುವಂತೆ ಹೇಳಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್‌ ಯಲ್ಲಪ್ಪ ಮಾತನಾಡಿ, ಸಮಾಜದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಶ್ಲಾಘನೀಯವಾದದ್ದು. ಪುಟ್ಟ ಮಕ್ಕಳ ಏಳಿಕೆಯಲ್ಲಿ ಮಹತ್ತರ ಪಾತ್ರವನ್ನು ಅವರು ನಿರ್ವಹಿಸುತ್ತಾರೆ ಎಂದರು. ಪ್ರಭಾರ […]