ಕೆಎಂಎ ವತಿಯಿಂದ ಡಾ. ಮಂತರ್ ಗೌಡರಿಗೆ ಸನ್ಮಾನ

ಪೊನ್ನಂಪೇಟೆ: ಕೊಡಗಿನ ಜಮ್ಮಾ ಹಿಡುವಳಿದಾರರನ್ನು ದಶಕಗಳದಿಂದ ಕಾಡುತ್ತಿದ್ದ ಜಮ್ಮಾ ಬಾಣೆ ಭೂಮಿಗೆ ಸಂಬಂಧಿಸಿದ ತಿದ್ದುಪಡಿ ವಿಧೇಯಕವನ್ನು ಕಳೆದ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಮಂತರ್ ಗೌಡ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು. ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ನ ಮಾನ್ಯ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರ ನೇತೃತ್ವದ ನಿಯೋಗ ಮಂಗಳವಾರದಂದು ಶಾಸಕರ ಸೋಮವಾರಪೇಟೆಯ ನಿವಾಸದಲ್ಲಿ ಭೇಟಿ ಮಾಡಿ […]

ಕೊಡಗು ಜಿಲ್ಲಾ ಮಲೆಯ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಮಡಿಕೇರಿ : ಕೊಡಗು ಜಿಲ್ಲಾ ಮಲೆಯ ಸಮಾಜದ ನೂತನ ಅಧ್ಯಕ್ಷರಾಗಿ ಎಂ.ಕೆ. ಅಶೋಕ್‌ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಮಾಜದ ವಾರ್ಷಿಕ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎಂ.ಎಸ್.‌ ಮುತ್ತಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಬಿದ್ದಪ್ಪ ಎಂ.ಪಿ. , ಸಹಕಾರ್ಯದರ್ಶಿಯಾಗಿ ರೀನಾ ರೋಶನ್‌, ಖಜಾಂಚಿಯಾಗಿ ಎಂ.ಎ. ಮಂಜುನಾಥ್‌ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಬಿ. ಗಣೇಶ್‌, ಎಂ.ಕೆ. ಯತೀಶ್‌, ಎಂ.ಜಿ. ವಿಜಿತ್‌, ಎಂ.ಯು. ದರ್ಶನ್‌, ಎಂ.ಎಂ. ಹ್ಯಾರಿ, ಎಂ.ಯು. ಬೆಲ್ಲು ಅವರನ್ನು ಆಯ್ಕೆ ಮಾಡಲಾಯಿತು. […]

ಸಿಐಪಿಯು ವಿದ್ಯಾರ್ಥಿನಿ ಡಿಂಪಲ್‌ಗೆ ಪ್ರತಿಭಾ ರತ್ನ ಪ್ರಶಸ್ತಿ

CIPU student

ಕರಾಟೆ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು.ಕಾಲೇಜಿನ ಪ್ರಥಮ ಪಿ.ಯು.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಡಿಂಪಲ್ . ಎಸ್. ವಿರಾಜಪೇಟೆ ತಾಲ್ಲೂಕು ಶಾಖೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೀಡುವ ಪ್ರತಿಭಾರತ್ನ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಈ ವಿದ್ಯಾರ್ಥಿನಿ ಅರಕಲಗೂಡು ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಫ್ -2025 ರಲ್ಲಿ ಪ್ರಥಮ ಸ್ಥಾನ , ಅಸ್ಮಿತಾ ಖೇಲೋ ಇಂಡಿಯಾ -2025 ಸ್ಪರ್ಧೆಯಲ್ಲಿ […]

ಸೆಸ್ಟೊಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕರ್ನಾಟಕಕ್ಕೆ ದ್ವಿತೀಯ ಸ್ಥಾನ, ಕೊಡಗಿನ ನಂದಿನಿ ಸಾಧನೆ

Cestoball National Championship

ಇತ್ತೀಚೆಗೆ ಉತ್ತರ ಪ್ರದೇಶದ ಬರೇಲಿಯ ಉಡಾನ್ ಗ್ಲೋಬಲ್ ಶಾಲೆಯಲ್ಲಿ ನಡೆದ 7ನೇ ವರ್ಷದ ಸೆಸ್ಟೊಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡವು ಅಮೋಘ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದ ಪ್ರತಿಭಾನ್ವಿತ ಕ್ರೀಡಾಪಟು ನಂದಿನಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕುಶಾಲನಗರದ ತರಬೇತುದಾರರಾದ ಜಾನ್ಸನ್ ಮತ್ತು ಕಾರ್ತಿಕ್ ಅವರ ಮಾರ್ಗದರ್ಶನದಲ್ಲಿ ಕಠಿಣ ತರಬೇತಿ ಪಡೆದಿದ್ದ ಕರ್ನಾಟಕ ತಂಡವು, ರಾಷ್ಟ್ರಮಟ್ಟದಲ್ಲಿ ಎದುರಾಳಿಗಳನ್ನು ಮಣಿಸಿ […]