ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಶ್ರೀ ಅಯ್ಯಪ್ಪ ಮಹೋತ್ಸವ

ವಿರಾಜಪೇಟೆ: ಸಮೀಪದ ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಮಹೋತ್ಸವ ಹಾಗೂ ಮಕರ ಜ್ಯೋತಿ ಪೂಜಾ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರುವಿನ ಅರ್ಚಕರಾದ ಪ್ರವೀಣ್ ಭಟ್ ರವರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಶ್ರೀ ಅಯ್ಯಪ್ಪ ಉತ್ಸವದ ಪ್ರಯುಕ್ತ ಬೆಳಿಗ್ಗೆ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆಯನ್ನು ಮಾಡಲಾಯಿತು. ತದನಂತರ ಅರ್ಚಕರು ಗಣಪತಿ ಹೋಮವನ್ನು ನೆರವೇರಿಸಿದರು. ಶ್ರೀ ಅಯ್ಯಪ್ಪ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ನಾಗ, ಶ್ರೀ […]