ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026- ಯುವ ಬಂಟ್ಸ್ ಅಸೋಸಿಯೇಷನ್‌ನಿಂದ ಸನ್ಮಾನ..!

ಮಡಿಕೇರಿ : ಕನ್ನಡ ಭವನದ ವತಿಯಿಂದ ನೀಡಲಾಗುವ ʼಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-2026ʼಗೆ ಭಾಜನರಾಗಿರುವ ಸಾಧಕರನ್ನು ಕೊಡಗು ಜಿಲ್ಲಾ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ಮಡಿಕೇರಿಯ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ಜರುಗಿದ ಕೊಡಗು ಜಿಲ್ಲಾ ಬಂಟರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿಗೆ ಭಾಜನರಾದ ಉಪನ್ಯಾಸಕಿ ಪ್ರತಿಮಾ ಹರೀಶ್ ರೈ, ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ನಿರೂಪಕಿ ಹರ್ಷಿತಾ ಶೆಟ್ಟಿ ಅವರನ್ನು ಅತಿಥಿಗಳು ಸನ್ಮಾನಿಸಿ, ಅಭಿನಂದಿಸಿದರು. ಜಿಲ್ಲೆಯ ಹೆಸರಾಂತ ಚಿತ್ರ ಕಲಾವಿದ ಬಿ.ಕೆ. ಗಣೇಶ್ […]
ಕತ್ತಲೆಕಾಡುವಿನಲ್ಲಿ ಸಂಭ್ರಮದ ಸಂಕ್ರಾಂತಿ ದೀಪಾರಾಧನೆ – ನೂತನ ಧ್ವನಿವರ್ಧಕ ಲೋಕಾರ್ಪಣೆ

ಮಡಿಕೇರಿ : ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಸಂಕ್ರಾಂತಿ ದೀಪಾರಾಧನೆ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಟ್ರಸ್ಟ್ ಆವರಣದಲ್ಲಿ ಗುರುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಲು ಹಣತೆ ಬೆಳಗಿದರು. ಟ್ರಸ್ಟ್‌ನ ಭಜನಾ ತಂಡದ ಸದಸ್ಯರು ಭಜನೆ ಮೂಲಕ ಮೆರುಗು ನೀಡಿದರು. ಸಾರ್ವಜನಿಕರು ಹಾಗೂ ದಾನಿಗಳ ಸಹಕಾರದಿಂದ ನೂತನವಾಗಿ ಖರೀದಿಸಲಾದ ಧ್ವನಿವರ್ಧಕವನ್ನು ಕಲಾವಿದ ಸುಭಾಷ್ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಭಜನೆ ಹಾಗೂ ಇನ್ನಿತರೆ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ 53 […]