ಕ್ಲೋಸ್‌ಬರ್ನ್ ಸಹಿಪ್ರಾ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಮಡಿಕೇರಿ : ಕಡಗದಾಳು ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವನ್ನು ಸಿಆರ್‌ಪಿ ನಿಶಾ ಹಾಗೂ ಶಾಲೆ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಪಠ್ಯಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳು ನಡೆದವು. ಮರಗೋಡು, ಅರೆಕಾಡು, ಬೋಯಿಕೇರಿ, ಕಟ್ಟೆಮಾಡು, ಕಡಗದಾಳು ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಾ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು. ವಿಜೇತರಿಗೆ ಅತಿಥಿಗಳು ಬಹುಮಾನ […]
ಲಾವಣ್ಯ ಬೋರ್ಕರ್‌ಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿ

ವಿರಾಜಪೇಟೆ: ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್ ಲಾವಣ್ಯ ಬೋರ್ಕರ್ ರವರಿಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆ ಟ್ರಸ್ಟ್ ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವದ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಲಾವಣ್ಯ ಬೋರ್ಕರ್ ರವರ ಕಲಾ ಹಾಗೂ ಭರತನಾಟ್ಯದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಇತ್ತೀಚೆಗೆ ಹಾಸನದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿದ ಸಮಾರಂಭದಲ್ಲಿ […]
ಕೂರ್ಗ್ ವ್ಯಾಲಿ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ

ವಿರಾಜಪೇಟೆ: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಬೇಕು. ಜೊತೆಗೆ ಪೋಷಕರು ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವುದರ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದು ಅರಮೇರಿ ಕಳಂಚೇರಿ ಮಠದ ಮಠಾಧಿಪತಿಗಳಾದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಯವರು ಹೇಳಿದರು. ಅವರು ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಜರುಗಿದ ಪಟ್ಟಣದ ಕೂರ್ಗ್ ವ್ಯಾಲಿ ಶಾಲೆಯ 25 ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕೂರ್ಗ್ ವ್ಯಾಲಿ ವಿದ್ಯಾಸಂಸ್ಥೆಯು 25 ವರ್ಷಗಳನ್ನು ಪೂರೈಸಿದ್ದು ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಈ […]
ವಾಲಿಬಾಲ್ ಕ್ರೀಡೆಯ ಉತ್ತೇಜನಕ್ಕೆ ಯೋಜನೆ ರೂಪಿಸಿ: ಶಾಸಕ ಪೊನ್ನಣ್ಣ

ಪೊನ್ನಂಪೇಟೆ: ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ವಾಲಿಬಾಲ್ ಕ್ರೀಡಾಪಟುಗಳಿದ್ದಾರೆ. ವಾಲಿಬಾಲ್ ಕ್ರೀಡೆಗೆ ಜಿಲ್ಲೆಯ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ವಾಲಿಬಾಲ್ ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಲು ಸೂಕ್ತವಾದ ಕಾರ್ಯ ಯೋಜನೆಗಳನ್ನು ರೂಪಿಸುವಂತೆ ವಿರಾಜಪೇಟೆ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸಲಹೆ ನೀಡಿದ್ದಾರೆ. ಕೊಡಗು ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ವಿರಾಜಪೇಟೆಯ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಮಂಗಳವಾರದಂದು ನಡೆದ ವಿಶೇಷ ಸಭೆಯಲ್ಲಿ ಪಾಲ್ಗೊಂಡು ವಿವಿಧ ಬೇಡಿಕೆಗಳನ್ನುೊಳಗೊಂಡ ಸಂಸ್ಥೆಯ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ಕೊಡಗಿನಲ್ಲಿ […]