ಜ.27 ಮತ್ತು 28 ರಂದು ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ  

ಮಡಿಕೇರಿ : ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಎನ್‍ಆರ್‍ಎಲ್‍ಎಂ, ಸಂಜೀವಿನಿ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಜನವರಿ, 27 ಮತ್ತು 28 ರಂದು ನಗರದ ಗಾಂಧಿ ಮೈದಾನದ ಆವರಣದಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

ಪ್ರೊ. ಬಸವರಾಜುಗೆ ಕನ್ನಡ ರತ್ನ ಪ್ರಶಸ್ತಿ

ವಿರಾಜಪೇಟೆ: ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಪ್ರಾಧ್ಯಾಪಕ ಪ್ರೊ. ಬಸವರಾಜು ಕೆ ರವರಿಗೆ ಕನ್ನಡ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ. ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಕನ್ನಂಬಾಡಿ ದಿನಪತ್ರಿಕೆ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸಂಕ್ರಾಂತಿ ಅಂಗವಾಗಿ ಸುಗ್ಗಿ ಸಂಭ್ರಮ ದ ಪ್ರಯುಕ್ತ 15 ನೇ ಅಖಿಲ ಕರ್ನಾಟಕ ಕನ್ನಡ ಅಕ್ಷರ ಜಾತ್ರೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ಇತ್ತೀಚೆಗೆ ಮಂಡ್ಯದ ಕೆ. ವಿ. ಶಂಕರಗೌಡ ಶತಮಾನೋತ್ಸವ ಭವನ […]

ಜ.24 ರಂದು ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜನವರಿ, 24 ರಿಂದ 26 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ‘ಫಲಪುಷ್ಪ ಪ್ರದರ್ಶನ’ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ […]

ಜ.22 ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ..!

ಮಡಿಕೇರಿ : ಪೊನ್ನಂಪೇಟೆಯ 66/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಫೀಡರ್ ನಿರ್ವಹಣೆ/ ಜಿಒಎಸ್ ಬದಲಾವಣೆ ಕಾಮಗಾರಿ ಕೈಗೊಗೊಳ್ಳುತ್ತಿದೆ. ಈ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಲ್ಲೂರು, ಎಫ್2-ಬಾಳೆಲೆ, ಎಫ್4-ತಿತಿಮತಿ, ಎಫ್5-ಪಾಲಿಬೆಟ್ಟ, ಎಫ್6 -ಬೇಗೂರು, ಎಫ್7-ಗೋಣಿಕೊಪ್ಪ, ಎಫ್8-ಪೊನ್ನಂಪೇಟೆ, ಎಫ್9-ಹಾತೂರು, ಎಫ್10-ಹೈಸೊಡ್ಲೂರು, ಎಫ್11-ಕೈಕೇರಿ, ಎಫ್12-ಬೆಕ್ಕಸೊಡ್ಲೂರು, ಎಫ್13 ದೇವನೂರು ಫೀಡರ್‍ನಲ್ಲಿ ಜನವರಿ 22 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿ ಆಗುವ ಗ್ರಾಮಗಳಾದ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅತ್ತೂರು, ಕಾನೂರು, ಬಾಳೆಲೆ, ರಾಜಪುರ, ದೇವನೂರು, […]