Power Cut: ನಾಳೆ ಕೊಡಗಿನ ಈ ಈ ಎಲ್ಲಾ ಪ್ರದೇಶಗಳಲ್ಲಿ ಇರಲ್ಲ ಕರೆಂಟ್‌!

Kodagu power cut

ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಫೆಬ್ರವರಿ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಕಣಿವೆ, ಮಲ್ಲೇನಹಳ್ಳಿ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕೂಡುಮಂಗಳೂರು, ಶಿರಂಗಾಲ, ಕಾನ್ ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಪನ್ಯ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮಡಿಕೇರಿ […]

ಕೊಡಗಿನಲ್ಲಿ ಶೀಘ್ರದಲ್ಲೇ ಮೆಗಾ ಪಾಸ್‌ಪೋರ್ಟ್‌ ಮೇಳ – ಸಂಸದ ಯದುವೀರ್ 

ನವದೆಹಲಿ : ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್ಪೋರ್ಟ್ ಸೇವಾ ಕೇಂದ್ರ ಆರಂಭಿಸುವಂತೆ ಕೇಂದ್ರ ವಿದೇಶಾಂಗ ಸಚಿವರಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರಹೊಮ್ಮುತ್ತಿದೆ. ಇಲ್ಲಿಂದ ದೇಶ-ವಿದೇಶಗಳಿಗೆ ತೆರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಈಗಿರುವ ಪಾಸ್ಪೋರ್ಟ್ ಸೇವಾ ಕೇಂದ್ರವನ್ನು ತತ್ಕಾಲ್ ಸೇವೆಯನ್ನೂ ಒಳಗೊಂಡಂತೆ ಪೂರ್ಣ ಪ್ರಮಾಣದ ಕೇಂದ್ರವನ್ನಾಗಿ ಮೇರ್ಲರ್ಜೆಗೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿರುವ ಅಂಚೆ ಕಚೇರಿ ಪಾಸ್ಪೋರ್ಟ್ […]

ಪೊಮ್ಮಕ್ಕಡ ಕೂಟದಿಂದ ಚೇರಂಬಾಣೆಯಲ್ಲಿ ಗೃಹಬಳಕೆ ವಸ್ತುಗಳ ತಯಾರಿ ಕಾರ್ಯಾಗಾರ

ಚೇರಂಬಾಣೆ : ಮಹಿಳೆಯರು ದಿನಬಳಕೆ ವಸ್ತುಗಳ ತಯಾರಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸ್ವಾವಲಂಬಿಯಾಗಬೇಕು ಎಂದು ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬಡ್ಡಿರ ನಳಿನಿ ಪೂವಯ್ಯ ಹೇಳಿದರು. ಚೇರಂಬಾಣೆ ಬೇಂಗ್‌ನಾಡು ಕೊಡವ ಸಮಾಜದಲ್ಲಿ ಮೊಮ್ಮಕ್ಕಡ ಕೂಟ ಮಹಿಳೆಯರಿಗಾಗಿ ಆಯೋಜಿಸಿದ್ದ ಗೃಹ ಬಳಕೆ ವಸ್ತುಗಳ ತಯಾರಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಸಂಸ್ಥೆಗಳು ಮಹಿಳೆಯರ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ ಮಹಿಳೆಯರು ಆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಆರ್ಥಿಕವಾಗಿ ಸ ಬಲರಾಗಬೇಕು ಎಂದರು. ಪ್ರಾತ್ಯಕ್ಷಿಕೆಯಲ್ಲಿ ಬಾಳೆದಿಂಡು, ನಿಂಬೆಹಣ್ಣು, ಕಾಳುಮೆಣಸು, ಶುಂಠಿ, ಕ್ಯಾರೆಟ್, […]

ಮೂರ್ನಾಡು ಸರ್ಕಾರಿ ಶಾಲೆಯಲ್ಲಿ ಪರಿಸರ ಜಾಗೃತಿ ಭಾಷಣ ಸ್ಪರ್ಧೆ

ಮೂರ್ನಾಡು : ಕ್ಲೀನ್ ಕೂರ್ಗ್ ಇನಿಶಿಯೇಟಿವ್ ಸದಸ್ಯರು ಹಾಗೂ ಮೂರ್ನಾಡು ಮಾರುತಿ ಶಾಲೆ ವಿದ್ಯಾರ್ಥಿಗಳು ಮೂರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಭಾಷಣ ಸ್ಪರ್ಧೆ ಏರ್ಪಡಿಸಿದ್ದರು. ಬಡವಂಡ ಅರುಣ್ ಅಪ್ಪಚ್ಚು ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿ ಭಾಷಣ ಸ್ಪರ್ಧೆ, ಪರಿಸರ ಮತ್ತು ಸ್ವಚ್ಛತೆಯ ಬಗ್ಗೆ ತಿಳಿ ಹೇಳುವ ಚಿತ್ರವನ್ನು ಶಾಲೆಯ ಗೋಡೆ ಮೇಲೆ ಚಿತ್ರೀಕರಿಸಲಾಯಿತು. ಸ್ಪರ್ಧೆಯ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಕುಮಾರಿ, ಶಿಕ್ಷಕ ವೃಂದ […]

ನಾಳೆ ಭಾರತ್​ ಬಂದ್​​: ಶಾಲಾ-ಕಾಲೇಜುಗಳು ರಜೆ ಇರುತ್ತಾ? ಏನಿರುತ್ತೆ? ಏನಿರಲ್ಲ?

Bharat Bandh

ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಭಾರತ-ಯುಎಸ್ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ವಿವಿಧ ಕಾರ್ಮಿಕ ಸಂಘಗಳು ಹಾಗೂ ರೈತ ಸಂಘಟನೆಗಳು ಫೆಬ್ರವರಿ 12ರಂದು (ನಾಳೆ) ದೇಶಾದ್ಯಂತ ಭಾರತ್ ಬಂದ್ಗೆ ಕರೆ ನೀಡಿವೆ. ಈ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು, ಸರ್ಕಾರಿ ಕಚೇರಿಗಳು, ಸಾರಿಗೆ ಸೇವೆಗಳು ಹಾಗೂ ಮಾರುಕಟ್ಟೆಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಸ್ಥಳೀಯ ಪರಿಸ್ಥಿತಿಗಳನ್ನು ಅವಲಂಬಿಸಿ ಅಡಚಣೆಗಳು ಹೆಚ್ಚು-ಕಡಿಮೆಯಾಗಬಹುದು. ತುರ್ತು ಸೇವೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ. ಮುಷ್ಕರದ ಕಾರಣ: ಕಳೆದ […]