ಕೊಡಗಿನ ಎಲ್‌ಪಿಜಿ ಗ್ಯಾಸ್ ಬಳಕೆದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ!

ಮಡಿಕೇರಿ:- ಜಿಲ್ಲೆಯಲ್ಲಿ ಗೃಹಬಳಕೆ ಎಲ್‍ಪಿಜಿ ಸಿಲಿಂಡರ್‍ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್‍ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಗ್ರಾಹಕರುಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಯಾವುದೇ ಆತಂಕಕ್ಕೆ ಒಳಗಾಗದೇ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಬುಕ್ ಮಾಡಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು.ಅಡುಗೆ ಅನಿಲವನ್ನು ಮಿತ ಬಳಕೆ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‍ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್‍ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿದ್ದು, […]