ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕೂಡಿಗೆ ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುವ ಸ್ವ-ಉದ್ಯೋಗ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವತಿಯರಿಗೆ ಮಾತ್ರ ಅವಕಾಶ. ಆಸಕ್ತಿ ಉಳ್ಳವರು ಸಂಸ್ಥೆಯನ್ನು ನೇರವಾಗಿ ಅಥವಾ ಕರೆ ಮಾಡಿ ಮಾಹಿತಿ ಪಡೆಯಬಹುದು. ಬ್ಯೂಟಿ ಪಾರ್ಲರ್ ತರಬೇತಿ: 35 ದಿನಗಳು. ಪ್ರಾರಂಭ 01.04.2026 ರಿಂದ 05.05.2026 ರ ವರೆಗೆ., ಮಹಿಳೆಯರ ಹೊಲಿಗೆ ತರಬೇತಿ: 31 ದಿನಗಳು. ಪ್ರಾರಂಭ 06.05.2026 […]
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡ ತನವನ್ನು ಬೆಳೆಸುವ ಕಾರ್ಯ ಮಾಡುತ್ತದೆ ಎಂದು ಸ. ಪ್ರ.ದ ಕಾಲೇಜಿನ ಪ್ರಾಂಶುಪಾಲೆ ಪ್ರೊ ಡಿ.ಕೆ. ಸರಸ್ವತಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ದಿ. ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಹಾಗೂ ಮಂಡೇಪಂಡ ಅಕ್ಕಮ್ಮ ಗಣಪತಿ […]
ಡಾ.ಐ.ಆರ್. ದುರ್ಗಾಪ್ರಸಾದ್ ವಿರುದ್ಧ ಅಪಪ್ರಚಾರಕ್ಕೆ ಖಂಡನೆ – ಆರೋಪಿಗಳ ಬಂಧನಕ್ಕೆ ಸಿಪಿಐ(ಎಂ) ಆಗ್ರಹ

ವೀರಾಜಪೇಟೆ : ಸಾಮಾಜಿಕ ಜಾಲತಾಣದಲ್ಲಿ ವೀರಾಜಪೇಟೆಯ ನಾಗರೀಕ ಸಮಿತಿಯ ಸಂಚಾಲಕರು, ಸಿಪಿಐ(ಎಂ) ಪಕ್ಷದ ಹಿರಿಯ ಜಿಲ್ಲಾ ಮುಖಂಡರಾದ ಡಾ. ಇ.ರಾ. ದುರ್ಗಾಪ್ರಸಾದ್ ಅವರನ್ನು ತೇಜೋವಧೆ, ವ್ಯಕ್ತಿನಿಂದನೆ ಹಾಹೂ ಅಪಪ್ರಚಾರ ಮಾಡಿ ಅವಮಾನಿಸಿದ್ದಾರೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ. ರಮೇಶ್ ಆರೋಪಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಮೇಶ್, ವೀರಾಜಪೇಟೆಯಲ್ಲಿ ಹಲವಾರು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ದುರ್ಗಾಪ್ರಸಾದ್ ಒಬ್ಬ ಹುಟ್ಟು ಹೋರಾಟಗಾರ. ಅವರು ಎಂದಿಗೂ ಬಡವರ ಹೊಟ್ಟೆಗೆ ಹೊಡೆದವರಲ್ಲ. ಅನ್ಯಾಯದ ವಿರುದ್ದ ಹೋರಾಟ ಮಾಡುತ್ತಾ, ಜನಸಮಾನ್ಯರ, ಕಾರ್ಮಿಕರ […]
ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಲೋಕಾರ್ಪಣೆ

ಕುಶಾಲನಗರ : ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ನೂತನ ಭವನವನ್ನು ವಿಧಾನಸಭೆ ಮಾಜಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಲೋಕಾರ್ಪಣೆಗೊಳಿಸಿದರು. ಗೌಡ ಬಾಂಧವರು ಸಾಂಪ್ರಾದಾಯಿಕ ಉಡುಪಿನಲ್ಲಿ ಕಂಗೊಳಿಸಿದರು. ಜಿಲ್ಲೆಯ ವಿವಿಧೆಡೆಗಳಿಂದ ಗೌಡ ಸಮಾಜ, ಸಂಘಟನೆ, ಯುವ ವೇದಿಕೆ ಹಾಗೂ ಮಹಿಳಾ ಒಕ್ಕೂಟದ ಪ್ರತಿನಿಧಿಗಳು ಆಗಮಿಸಿದ್ದರು. ಸಮುದಾಯ ಭವನಕ್ಕೆ ಧನಸಹಾಯ ನೀಡಿದವರು ಹಾಗೂ ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು. ಶಾಸಕ ಡಾ.ಮಂತರ್ ಗೌಡ, ಮಾತನಾಡಿ ಗೌಡ ಸಮುದಾಯ ಎಲ್ಲಾ ಕ್ಷೇತ್ರಗಳಿಗೂ ತನ್ನದೇ […]