ಕಾವೇರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂವಾದ ಕಾರ್ಯಕ್ರಮ

ಪ್ರಯತ್ನ ಮತ್ತು ಪರಿಶ್ರಮದಿಂದ ಗುರಿಯನ್ನು ಮುಟ್ಟಬಹುದೇ ಹೊರತು ಅದೃಷ್ಟ, ಹಣೆಬರಹ ನಂಬಿದರೆ ಯಶಸ್ಸನ್ನು ಪಡೆಯಲು ಸಾಧ್ಯವಿಲ್ಲ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ರುದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ (Cauvery College) ಐಕ್ಯೂಎಸಿ ಹಾಗೂ ಇತಿಹಾಸ ವಿಭಾಗದ ವತಿಯಿಂದ ಮಂಗಳವಾರ ಕಾಲೇಜಿನ ಕೌಸ್ತುಬ ಸಭಾಭವನದಲ್ಲಿ ಆಯೋಜಿಸಲಾಗಿದ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯಲ್ಲಿ ಸಮಯ ನಿರ್ವಹಣೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇತಿಹಾಸ ವಿಷಯದ ಮಹತ್ವ ಎಂಬ ವಿಷಯದ ಕುರಿತು ನಡೆದ ಸಂವಾದ ಕಾರ್ಯಕ್ರಮವನ್ನು […]

ಲೆದರ್‌ಬಾಲ್ ಕ್ರಿಕೆಟ್: ಜಿಲ್ಲಾ ತಂಡಕ್ಕೆ ಪ್ರಗತಿ ಶಾಲೆಯ ವಿದ್ಯಾರ್ಥಿನಿಯರು ಆಯ್ಕೆ

ವಿರಾಜಪೇಟೆ :  ವಿರಾಜಪೇಟೆಯ ಪ್ರಗತಿ ನರ್ಸರಿ, ಪ್ರೈಮರಿ ಮತ್ತು ಹೈ ಸ್ಕೂಲ್ ಹಾಗೂ ಪ್ರಗತಿ ಕ್ರಿಕೆಟ್ ಅಕಾಡೆಮಿಯ ವಿದ್ಯಾರ್ಥಿನಿಯರು ಕೊಡಗು ಜಿಲ್ಲಾ ಲೆದರ್‌ಬಾಲ್ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದು, ಶಾಲೆಗೆ  ಕೀರ್ತಿ ತಂದಿದ್ದಾರೆ. ಅಂಡರ್-15 ವಿಭಾಗದಲ್ಲಿ ವಿನ್ಯಾ ಎನ್. ಎಸ್. ಪ್ರತೀಕ್ಷಾ ಕೆ ಎನ್ ,  ವರ್ಷಿಣಿ ಕೆ ಎಚ್ ಹಾಗೂ ಅಂಡರ್-19 ವಿಭಾಗದಲ್ಲಿ ಸಾನ್ವಿ ಎಸ್ ಭಟ್, ಧನ್ವಿ ಬಿ. ಆರ್.ಇವರು ಕೊಡಗು ಜಿಲ್ಲಾ ಲೆದರ್‌ಬಾಲ್ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ ಉಡುಪಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ. ಈ ಪಂದ್ಯಗಳಲ್ಲಿ ಉಡುಪಿ, ದಕ್ಷಿಣ […]