ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ – ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ

ಮಡಿಕೇರಿ : ಸುಸಂಸ್ಕೃತ ಸಮಾಜ ನಿರ್ಮಾಣದಕ್ಕೆ ಬಂಟ ಸಮಾಜದ ಕೊಡುಗೆ ದೊಡ್ಡದಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನ ಗುರುದೇವಾನಂದ ಸ್ವಾಮೀಜಿ ಬಣ್ಣಿಸಿದರು. ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್‌ ಹಾಗೂ ಜಿಲ್ಲಾ ಬಂಟರ ಸಂಘದ ವತಿಯಿಂದ ಶುಕ್ರವಾರ ಮಡಿಕೇರಿಯಲ್ಲಿ ಜರುಗಿದ ಬಂಟರ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಇಂದಿನ ಸಮಾಜಕ್ಕೆ ಸುಸಂಸ್ಕೃತ ಪ್ರಜೆಗಳ ಅಗತ್ಯವಿದೆ. ಮಕ್ಕಳಿಗೆ ಸಂಸ್ಕಾರ ಕಲಿಸುವ ಕಾರ್ಯವನ್ನು ಮನೆಯಿಂದಲೇ ಆರಂಭಿಸಬೇಕು. ಈ ವಿಚಾರದಲ್ಲಿ ಮಾತೆಯರಿಗೆ ಮಹತ್ತರ ಜವಾಬ್ದಾರಿ ಇದೆ […]