ಮೇ 26ಕ್ಕೆ ನುಡಿ ಉತ್ಸವದ ರಾಷ್ಟ್ರಮಟ್ಟದ ವಿಚಾರ ಸಂಕಿರಣ

ಕೊಡಗಿನ ನುಡಿ ಉತ್ಸವ ಸಮಿತಿ, ಕೊಡಗು ವಿಶ್ವವಿದ್ಯಾಲಯ ಮತ್ತು ಕಾವೇರಿ ಕಾಲೇಜು ವಿರಾಜಪೇಟೆ ಇವರ ಸಹಭಾಗಿತ್ವದಲ್ಲಿ ಮೇ 26ರಂದು ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲೆ ಡಾ.ಕೆ.ಜಿ.ವೀಣಾ ಮಾಹಿತಿ ನೀಡಿದರು. ವಿರಾಜಪೇಟೆ ಪತ್ರಕರ್ತರ ವೇದಿಕೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು “ಗಡಿ ಪ್ರದೇಶಗಳ ಪಠ್ಯಕ್ರಮದಲ್ಲಿ ಕನ್ನಡ ಭಾಷಾ ಶಿಕ್ಷಣ ಸ್ವರೂಪ, ಭಾಷಾ ನೀತಿ ಹಾಗೂ ಬಹುಭಾಷಾ ವಾಸ್ತವಿಕತೆಗಳ ಮರುಚಿಂತನೆ” ಎಂಬ ಪರಿಕಲ್ಪನೆಯ ಕುರಿತು […]