ಅನಧಿಕೃತ ಹೋಂ-ಸ್ಟೇಗಳ ವಿರುದ್ಧ ಕಠಿಣ ಕ್ರಮ; ಉಪ ವಿಭಾಗಾಧಿಕಾರಿ ಎಚ್ಚರಿಕೆ

homestay

ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಅಧಿಕೃತ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪತ್ರ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇ ಮಾಲೀಕರು ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪತ್ರ ಪಡೆದ ನಂತರವೇ ಹೋಂ-ಸ್ಟೇಗಳನ್ನು ನಡೆಸುವಂತೆ ಸೂಚಿಸಲಾಗಿದೆ. ನೋಂದಣಿ ಮಾಡಿಸದೇ ಅನಧಿಕೃತವಾಗಿ ಹೋಂ-ಸ್ಟೇಗಳು ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಲ್ಲಿ ಅಂತಹ ಹೋಂ-ಸ್ಟೇಗಳ ವಿರುದ್ಧ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ-2015ರಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. […]

ಚುನಾವಣಾ ರಾಜಕಾರಣಕ್ಕೆ ಹಳ್ಳಿಹಕ್ಕಿ ಗುಡ್‌ ಬೈ – 50 ಕೋಟಿ ಖರ್ಚು ಮಾಡುವ ಶಕ್ತಿ ಇಲ್ಲ ಎಂದ ವಿಶ್ವನಾಥ್..!

ಮೈಸೂರು : ವಿಧಾನ ಪರಿಷತ್‌ ಸದಸ್ಯ, ಮಾಜಿ ಸಂಸದ ಎಚ್.‌ ವಿಶ್ವನಾಥ್‌ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈಗಿನ ರಾಜಕಾರಣ ಬದಲಾಗಿದೆ. ಈ ಹಿಂದೆ ನಾನು ಚುನಾವಣೆ ಎದುರಿಸಿದ್ದಾಗ ಜನರೇ ಹಣ ನೀಡಿ ಗೆಲ್ಲಿಸಿದ್ದರು. ಆದರೆ ಈಗ ಹಣ ಕೊಟ್ಟು ಚುನಾವಣೆ ಎದುರಿಸುವ ಪರಿಸ್ಥಿತಿ ಇದೆ. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವ ಶಕ್ತಿ ನನ್ನಲ್ಲಿಲ್ಲ. ಹೀಗಾಗಿ ಮುಂದೆ ಯಾವುದೇ ಚುನಾವಣೆಯಲ್ಲೂ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ಚುನಾವಣಾ ರಾಜಕಾರಣಕ್ಕೆ […]

ಕೊಡಗಿನ ನವೀನ್ ಡಿಸೋಜ, ಹಿರಿಕರ ರವಿಗೆ ದತ್ತಿನಿಧಿ ಪ್ರಶಸ್ತಿ

ಮಡಿಕೇರಿ : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ನೀಡುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ವರದಿಗಾರರಾದ ನವೀನ್ ಡಿಸೋಜ ಹಾಗೂ ಹಿರಿಕರ ರವಿ ಆಯ್ಕೆಯಾಗಿದ್ದಾರೆ. ಉದ್ಯಮಿ ಶಿವಶಂಕರ ನೆಕಾಜೆ ನೀಡುವ ದತ್ತಿನಿಧಿ ಪ್ರಶಸ್ತಿಗೆ ಆಂದೋಲನ ದಿನಪತ್ರಿಕೆಯ ಕೊಡಗು ಜಿಲ್ಲಾ ವರದಿಗಾರ ನವೀನ್ ಡಿಸೋಜ ಆಯ್ಕೆಯಾಗಿದ್ದರೆ, ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ನೀಡುವ ದತ್ತಿನಿಧಿ ಪ್ರಶಸ್ತಿಗೆ ಸೋಮವಾರಪೇಟೆ ವಿಜಯವಾಣಿ ವರದಿಗಾರ ಹಿರಿಕರ ರವಿ ಆಯ್ಕೆಯಾಗಿದ್ದಾರೆ. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ […]

ʼಮನೆಯಂಗಳದಲ್ಲಿ ಮನದುಂಬಿʼ ಚಿ.ನಾ. ಸೋಮೇಶ್‌ ಅವರಿಗೆ ಸನ್ಮಾನ

ಮಡಿಕೇರಿ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತರು, ಸಂಘದ ಮಾಜಿ ಅಧ್ಯಕ್ಷರಾದ ಚಿ.ನಾ.ಸೋಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿರುವ ಸೋಮೇಶ್ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೋಮೇಶ್ ಅವರು, ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಕಾರ್ಯನಿರತ ಪತ್ರಕರ್ತರ ಸಂಘ ಇಂದಿಗೂ ಗಟ್ಟಿಯಾಗಿ ನೆಲೆಯೂರಿದೆ. ಈ ಸಂಘದ […]