ನಿವೃತ್ತಿ ನಂತರವೂ ಶಿಕ್ಷಣಕ್ಕೆ ಸಮರ್ಪಣೆ – ಒಂದು ವರ್ಷ ಸೇವೆ ಮುಂದುವರೆಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಕಿ

ಮಡಿಕೇರಿ : ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ವಯೋನಿವೃತ್ತಿ ಬಳಿಕ ಒಂದು ವರ್ಷ ಕಾಲ ಸ್ವಇಚ್ಛೆಯಿಂದ ತನ್ನ ಸೇವೆಯನ್ನು ನೀಡುವ ಮಹತ್ವ ನಿರ್ಧಾರ ಕೈಗೊಳ್ಳುವ ಮೂಲಕ ಮಾದರಿ ನಡೆ ತೋರಿದ್ದಾರೆ. ಮಡಿಕೇರಿ ತಾಲೂಕಿನ ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕರಾಗಿದ್ದ ಎಂ.ಟಿ. ಲಕ್ಷ್ಮೀ ಈ ಮಾದರಿ ನಿರ್ಧಾರ ತೆಗೆದುಕೊಂಡವರು. 32 ವರ್ಷ ಕಾಲ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಅವರು ಮೇ 30ಕ್ಕೆ ವಯೋನಿವೃತ್ತಿಯಾದರು. ಈ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ವೇಳೆ ಸಹಶಿಕ್ಷಕರು, ಎಸ್‌ಡಿಎಂಸಿ, ಹಳೆ […]