ಎ.ಎಸ್. ಪೊನ್ನಣ್ಣ ಅಭಿವೃದ್ಧಿಯ ಹರಿಕಾರ – ಅವರಿಗೆ ಸಚಿವ ಸ್ಥಾನ ನೀಡಬೇಕು : ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ

ವಿರಾಜಪೇಟೆ : ನೂತನ ಸಚಿವ ಸಂಪುಟದಲ್ಲಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಹಾಗೂ ವಿರಾಜಪೇಟೆ ತಾಲೂಕು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಜೋಕೀಂ ರಾಡ್ರಿಗಸ್ ಮಾತನಾಡಿ, ಪೊನ್ನಣ್ಣರವರಿಗೆ ಸಚಿವ ಸ್ಥಾನ ನೀಡಿದಲ್ಲಿ ಕೊಡಗು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ. ಇಂದು ಶಾಸಕರು ಸಂಪೂರ್ಣವಾಗಿ ಅನುದಾನವನ್ನು ತಂದು ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಎಲ್ಲೆಡೆ ರಸ್ತೆಗಳು ಕಾಂಕ್ರಿಟೀಕರಣಗೊಳ್ಳುತಿದ್ದು ಶಾಸಕರ ಕಾರ್ಯವೈಖರಿಗೆ ಒಂದು ಉದಾಹರಣೆಯಾಗಿದೆ ಎಂದು ಹೇಳಿದರು. ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ವಿರಾಜಪೇಟೆ […]