ತಂತ್ರವೇ ಯಶಸ್ಸಿನ ಮೂಲ, ಕೇವಲ ಕಲ್ಪನೆಗಳಿಂದ ಉದ್ಯಮ ಯಶಸ್ವಿಯಾಗುವುದಿಲ್ಲ: ವೇಣು ಶರ್ಮಾ

ಮೂಡುಬಿದಿರೆ: ಉದ್ಯಮದಲ್ಲಿ ಯಶಸ್ಸು ಸಾಧಿಸಲು ಕೇವಲ ಹೊಸ ಕಲ್ಪನೆಗಳನ್ನು ಹೊಂದಿರುವುದಷ್ಟೇ ಸಾಲದು; ಅವುಗಳನ್ನು ಕಾರ್ಯರೂಪಕ್ಕೆ ತರುವ ಸಮರ್ಥ ತಂತ್ರ, ದೃಢ ಪ್ರಕ್ರಿಯೆ, ನಿರಂತರ ಪ್ರಯತ್ನ ಮತ್ತು ಶಿಸ್ತು ಅಗತ್ಯ ಎಂದು ಖ್ಯಾತ ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್ ಹಾಗೂ ಮಾಸ್ಟರ್‌ಚೆಫ್ ಇಂಡಿಯಾ ಸೆಮಿಫೈನಲಿಸ್ಟ್ ವೇಣು ಶರ್ಮಾ ಅಭಿಪ್ರಾಯಪಟ್ಟರು.ಅವರು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗ ಆಯೋಜಿಸಿದ್ದ ‘ಪರಿಣಾಮಕಾರಿ ಕಾರ್ಯತಂತ್ರ ರೂಪಿಸುವುವ ಬಗೆ’ ವಿಶೇಷ ತರಬೇತಿ ಕರ‍್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಹೊಸ ಕಲ್ಪನೆಗಳಿಗಿಂತ […]