ಮೂರ್ನಾಡುವಿನಲ್ಲಿ ಆ. 15ರಂದು ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ

ಮಡಿಕೇರಿ: ಭಾರತ ಸ್ವಾತಂತ್ರ್ಯದ 80ನೇ ವರ್ಷಾಚರಣೆಯ ಅಂಗವಾಗಿ ಇದೇ ಆಗಸ್ಟ್ 15ರಂದು ಮೂರ್ನಾಡು ಕೊಡವ ಸಮಾಜದಲ್ಲಿ ‘ಯುನೈಟೆಡ್ ಕೊಡವ ಆರ್ಗನೈಜೇಷನ್’ (ಯುಕೊ) ಹಾಗೂ ‘ಮೂರ್ನಾಡು ಕೊಡವ ಸಮಾಜ’ದ ಜಂಟಿ ಸಹಯೋಗದಲ್ಲಿ “ನೆಪ್ಪುರ ನಳತ್ ಮಾಂಜತ ಮೊಟ್ಟ್” (‘The Ever Lasting Footprints in the Shadow of Memories’) ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೊಡಗಿನ ನೈಜ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದಾಗಿ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ತಿಳಿಸಿದ್ದಾರೆ. ಮೂರ್ನಾಡು ಕೊಡವ ಸಮಾಜದ […]
ಮನೆಗಳಿಂದಲೇ ಆರಂಭವಾಗಲಿ ಪರಿಸರ ಸ್ವಚ್ಛತೆಯ ಜಾಗೃತಿ: ವಿರಾಜಪೇಟೆಯಲ್ಲಿ ಅರ್ಥಪೂರ್ಣ ‘ವನಮಹೋತ್ಸವ’

ವಿರಾಜಪೇಟೆ: ಪರಿಸರ ಸ್ವಚ್ಛತೆ ಮತ್ತು ಸಂರಕ್ಷಣೆಯ ಪರಿಪಾಠವು ಪ್ರತಿಯೊಬ್ಬರ ಮನೆಗಳಿಂದಲೇ ಆರಂಭವಾಗಬೇಕು. ಮನೆಯಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿದಾಗ ಮಾತ್ರ ಸಮಾಜದಲ್ಲಿಯೂ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ ಎಂದು ವಿರಾಜಪೇಟೆ ತಾಲೂಕು ತಹಸಿಲ್ದಾರ್ ಪ್ರವೀಣ್ ಕುಮಾರ್ ಅವರು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆಯ ತಾಲೂಕು ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ, ವಿರಾಜಪೇಟೆ ಪತ್ರಕರ್ತರ ವೇದಿಕೆ, ನ್ಯೂಸ್ 3 ಡಿಜಿಟಲ್ ಮೀಡಿಯಾ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ವನಮಹೋತ್ಸವ’ ಕಾರ್ಯಕ್ರಮದಲ್ಲಿ […]
ಕಾವೇರಿ ವಿವಾದ: ಆಗಸ್ಟ್ 3ರ ಬೆಂಗಳೂರಿನಲ್ಲಿ ನಡೆಯುವ ಸಭೆಗೆ ತಮಿಳುನಾಡು ಸಿಎಂ ವಿಜಯ್ ಬರ್ತಾರಾ?

ಬೆಂಗಳೂರು: ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಆಗಸ್ಟ್ 3 ರಂದು ರಾಜಧಾನಿ ಬೆಂಗಳೂರಿನಲ್ಲಿ ಪ್ರಮುಖ ಸಭೆಯೊಂದನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಆಹ್ವಾನ ನೀಡಲಾಗಿದ್ದು, ಸಭೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ, ಪ್ರಸ್ತುತ ಇರುವ ರಾಜಕೀಯ ಮತ್ತು ಭದ್ರತಾ ಸನ್ನಿವೇಶಗಳ ಹಿನ್ನೆಲೆಯಲ್ಲಿ ಸಿಎಂ ವಿಜಯ್ ನೇರವಾಗಿ ಆಗಮಿಸುವ ಬದಲು ವರ್ಚುವಲ್ (ಆನ್‌ಲೈನ್) ಮೂಲಕ ಭಾಗವಹಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಕಾವೇರಿ ನೀರು […]
ಅವೋರ್ ಇಎಕ್ಸ್ ಇವಿ ಬೈಕ್ ಬಿಡುಗಡೆ: ಬೆಲೆ ₹1.25 ಲಕ್ಷ, 260 ಕಿ.ಮೀ ರೇಂಜ್!

ಬೆಂಗಳೂರು: ದೇಶೀಯ ಇವಿ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಸಲು ಭಾರತದ ತಂತ್ರಜ್ಞಾನ ಆಧಾರಿತ ಎಲೆಕ್ಟ್ರಿಕ್ ವಾಹನ ತಯಾರಕ ಸಂಸ್ಥೆ ‘ಅವೋರ್ ಎಲೆಕ್ಟ್ರಿಕ್’ (Avor Electric) ತನ್ನ ಬಹುನಿರೀಕ್ಷಿತ ‘ಅವೋರ್ ಇಎಕ್ಸ್’ (Avor EX) ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸಮರ್ಥ್ ಇ-ಮೊಬಿಲಿಟಿ ಸಂಸ್ಥೆಯ ಭಾಗವಾಗಿರುವ ಈ ಕಂಪನಿಯು, ಪ್ರತಿಯೊಬ್ಬ ಭಾರತೀಯ ಸವಾರರ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಈ ಇವಿ ಬೈಕ್ ಅನ್ನು ರೂಪಿಸಿದೆ. ಇದರ ಆರಂಭಿಕ ಎಕ್ಸ್-ಶೋರೂಮ್ ಬೆಲೆ ₹1,24,999 ಆಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪನಿಯು […]