ವಿದ್ಯಾರ್ಥಿಗಳಿಗೆ ಶಿಸ್ತು, ನಾಯಕತ್ವ ಹಾಗೂ ಪರಿಶ್ರಮವೇ ಯಶಸ್ಸಿನ ಮೆಟ್ಟಿಲು: ಅನೂಪ್ ಮಾದಪ್ಪ

ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನ ಸಭಾಂಗಣದಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನ ಸಂಘದ ಉದ್ಘಾಟನಾ ಸಮಾರಂಭವು ಮಂಗಳವಾರ ಜರುಗಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನೂತನ ವಿದ್ಯಾರ್ಥಿ ನಾಯಕರು ಹಾಗೂ ತರಗತಿ ಪ್ರತಿನಿಧಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದ ವಿರಾಜಪೇಟೆ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ಅವರು, ಸಮಾಜಕ್ಕೆ ಉತ್ತಮ ಪ್ರಜೆಯಾಗಲು ಶಿಸ್ತು, ಅನ್ಯೋನ್ಯತೆ ಹಾಗೂ ನಾಯಕತ್ವದ ಗುಣಗಳು ಅತ್ಯಂತ ಮುಖ್ಯ ಎಂದು ಅಭಿಪ್ರಾಯಪಟ್ಟರು. ಪದವಿ ಹಂತದ ಶಿಕ್ಷಣವು ಬದುಕಿನ ಮಹತ್ವದ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟ ಹಾಗೂ ಸಾಮಾಜಿಕ […]