ಕೆ.ಎಂ.ಎ. ಕನ್ನಡ ಚೈತನ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ವಿಶೇಷ ಶೈಕ್ಷಣಿಕ ಪುರಸ್ಕಾರವನ್ನು ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರು ತಮ್ಮ ದಿವಂಗತ ತಂದೆ ದುದ್ದಿಯಂಡ ಹುಸೈನಾರ್ ಹಾಜಿ ಮತ್ತು ದಿವಂಗತ ತಾಯಿ ಆಮೀನರವರ ಸ್ಮರಣಾರ್ಥವಾಗಿ ಪ್ರಾಯೋಜಿಸಿರುವ ‘ಕೆ.ಎಂ.ಎ. ಕನ್ನಡ ಚೈತನ್ಯ ಪುರಸ್ಕಾರ-2026’ಕ್ಕೆ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಸರಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡಿ 2025-26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್. ಸಿ. […]