ಬೇಟೋಳಿಯಲ್ಲಿ ವೈಭವದ ಗೌರಿ-ಗಣೇಶ ವಿಸರ್ಜನೋತ್ಸವ

Gauri-Ganesha

ವಿರಾಜಪೇಟೆ: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 44ನೇ ವರ್ಷದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವವು ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ನೆರವೇರಿತು. ಕಳೆದ ಏಳು ದಿನಗಳಿಂದ ಶ್ರೀ ಗಣಪತಿ ಮತ್ತು ಗೌರಿ ದೇವರುಗಳ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗಿತ್ತು. ವಿಸರ್ಜನೋತ್ಸವದಂದು ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಅವರ ನೇತೃತ್ವದಲ್ಲಿ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ […]

ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ ಗರಿ

Teacher Award

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಇಬ್ಬರು ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊಡಗಿನ ಯಲಿಯಂಗಾಡು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಅಶ್ವಿನಿ ಎಂ.ಎಸ್. ಹಾಗೂ ಮುಳ್ಳೂರು ಸ.ಕಿ.ಪ್ರಾ. ಶಾಲೆಯ ಶಿಕ್ಷಕ ಶ್ರೀ ಜಾನ್ ಪೌಲ್ ಡಿಸೋಜ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಈ […]