ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ: ತಕ್ಷಣವೇ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಲು ಸೂಚನೆ

DC Somashekar

ಹೆದ್ದಾರಿ 275ರ ಆನೆಕಾಡು ಬಳಿ ಇತ್ತೀಚೆಗೆ ಸಂಭವಿಸಿದ ಸರಣಿ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಮಂಗಳವಾರ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನೆಕಾಡು ಹೆದ್ದಾರಿ ವ್ಯಾಪ್ತಿಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಸಾವು-ನೋವುಗಳನ್ನು ತಡೆಯಲು ತುರ್ತು ಕ್ರಮ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸುವುದು ಹಾಗೂ ವೇಗ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಹೆದ್ದಾರಿ ವಿಭಾಗದ ಎಂಜಿನಿಯರ್‌ಗೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು. ತುರ್ತು ರಸ್ತೆ ಸುರಕ್ಷತಾ […]